ವಿದ್ಯುತ್ ಪರಿವರ್ತಕದಿಂದ ಹಾರಿದ ಬೆಂಕಿ ಕಿಡಿ ► ಮರ್ಧಾಳದಲ್ಲಿ ಎರಡು ಮನೆಗಳು ಸಂಪೂರ್ಣ ಭಸ್ಮ

(ನ್ಯೂಸ್ ಕಡಬ) newskadaba.com ಕಡಬ, ಮಾ.23. ವಿದ್ಯುತ್ ಪರಿವರ್ತಕದಿಂದ ಬೆಂಕಿಯ ಕಿಡಿಯೊಂದು ಬಿದ್ದ ಪರಿಣಾಮ ಎರಡು ಮನೆಗಳು ಬೆಂಕಿಗಾಹುತಿಯಾದ ಘಟನೆ ಮರ್ಧಾಳ ಸಮೀಪದ 102 ನೇ ನೆಕ್ಕಿಲಾಡಿ ಗ್ರಾಮದ ಕೆರ್ಮಾಯಿ ಕಾಲೋನಿಯಲ್ಲಿ ಶುಕ್ರವಾರದಂದು ನಡೆದಿದೆ.

 

ಘಟನೆಯಲ್ಲಿ ಸೆಲ್ವಮಣಿ ಮತ್ತು ರವಿ ಮೇಸ್ತ್ರಿ ಎಂಬವರಿಗೆ ಸೇರಿದ ಎರಡು ಮನೆಗಳು ಬೆಂಕಿಗಾಹುತಿಯಾಗಿದ್ದು, ಮನೆಯೊಳಗಿದ್ದ ಟಿವಿ, ಪ್ರಿಡ್ಜ್, ಲ್ಯಾಪ್‌ಟಾಪ್ ಸೇರಿದಂತೆ ಇಲೆಕ್ಟ್ರಾನಿಕ್ ವಸ್ತುಗಳು ಹಾಗೂ ಗೃಹೋಪಯೋಗಿ ವಸ್ತುಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಬೆಂಕಿ ಬಿದ್ದುದನ್ನು ಗಮನಿಸಿದ ಸ್ಥಳೀಯರು ಬೆಂಕಿ ಹರಡದಂತೆ ನೀರು ಹಾಯಿಸಿ ಹತೋಟಿಗೆ ತಂದಿದ್ದಾರೆ. ಸ್ಥಳಕ್ಕೆ ಪುತ್ತೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Also Read  ಹೊಸ್ಮಠ ಹಳೆ ಮುಳುಗು ಸೇತುವೆ ಮುಳುಗಡೆ

error: Content is protected !!
Scroll to Top