ಮಂಗಳೂರು: ಐಬಿಆರ್‌ಟಿ ಸಂಸ್ಥೆ ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಬ್ರಿಜೇಶ್ ಚೌಟ ಮನವಿ

(ನ್ಯೂಸ್ ಕಡಬ)newskadaba.com  ಮಂಗಳೂರು, ನ.25. ಬ್ಯಾಂಕ್‌ಗಳ ತೊಟ್ಟಿಲು ಎಂದು ಕರೆಸಿಕೊಂಡಿರುವ ಮಂಗಳೂರಿನಲ್ಲಿ ಬ್ಯಾಂಕಿಂಗ್ ಸಂಶೋಧನಾ ಹಾಗೂ ತರಬೇತಿ ಸಂಸ್ಥೆ(ಐಬಿಆರ್‌ಟಿ) ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದಿಲ್ಲಿಯಲ್ಲಿ ಶನಿವಾರ ಭೇಟಿಯಾಗಿ ಮನವಿ ಸಲ್ಲಿಸಿರುವ ಸಲ್ಲಿಸಿರುವ ಚೌಟ ಅವರು ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್ ಗಾರ್ಡ್ ಅಕಾಡೆಮಿ ಸ್ಥಾಪನೆ, ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಜತೆಗೆ ವಿಲೀನ ಸೇರಿ ದಕ್ಷಿಣ ಕನ್ನಡದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ ಪ್ರಸ್ತಾವಿತ ಪ್ರಮುಖ ಯೋಜನೆಗಳನ್ನು ಆದಷ್ಟು ಬೇಗ ಕಾರ್ಯಗತಗೊಳಿಸುವಂತೆ ಆಗ್ರಹಿಸಿದ್ದಾರೆ.

Also Read  ಕೋಡಿಂಬಾಳದಲ್ಲಿ ಪಡಿತರ ವ್ಯವಸ್ಥೆ ಶೀಘ್ರ ಆರಂಭ ➤ ಕಡಬ ಪ್ರಾ.ಕೃ.ಪ.ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ

 

error: Content is protected !!
Scroll to Top