ಸಂಸತ್ ಚಳಿಗಾಲ ಅಧಿವೇಶನ: ಜನರಿಂದ ತಿರಸ್ಕರಿಸಲ್ಪಟ್ಟವರು ಸಂಸತ್ತು ನಿಯಂತ್ರಿಸಲು ಯತ್ನಿಸುತ್ತಿದ್ದಾರೆ: ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಕಿಡಿ

(ನ್ಯೂಸ್ ಕಡಬ)newskadaba.com  ನವದೆಹಲಿ, ನ.25:  ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗುತ್ತಿದ್ದು, ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ಅಧಿವೇಶನ ಕಲಾಪದಲ್ಲಿ ಭಾಗವಹಿಸುವ ಮುನ್ನ ಸಂಸತ್ತಿನ ಹೊರಗೆ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಪ್ರಧಾನಿ ಮೋದಿ ಅವರು ಮಾತನಾಡಿದರು. 2024 ವರ್ಷದ ಕೊನೆಯ ದಿನಗಳು ನಡೆಯುತ್ತಿದ್ದು, ದೇಶವು 2025ರ ನೂತನ ವರ್ಷಕ್ಕೆ ತಯಾರಿ ನಡೆಸುತ್ತಿದೆ. ಸಂಸತ್ತಿನ ಈ ಅಧಿವೇಶನವು ಹಲವಾರು ವಿಧಗಳಲ್ಲಿ ವಿಶೇಷವಾಗಿದೆ. ಅತ್ಯಂತ ಮುಖ್ಯ ವಿಷಯವೆಂದರೆ ಸಂವಿಧಾನದ 75 ನೇ ವರ್ಷದ ಆರಂಭ. ನಾಳೆ, ಸಂವಿಧಾನ ದಿನ. ಎಲ್ಲರೂ ಸಂವಿಧಾನದ 75 ನೇ ವರ್ಷವನ್ನು ಆಚರಿಸುತ್ತಾರೆ. 75ನೇ ವರ್ಷದ ಸಂವಿಧಾನದ ದಿನದ ಸಂದರ್ಭದಲ್ಲಿ ಅಧಿವೇಶನ ನಡೆಯುತ್ತಿದ್ದು, ಈ ಅಧಿವೇಶನದ ಕಲಾಪ ಸುಗಮವಾಗಿ ಸಾಗಲು ವಿರೋಧ ಪಕ್ಷಗಳು ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದರು.

Also Read  ಕೆನ್-ಬೆಟ್ವಾ ನದಿ ಜೋಡಣೆ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ಅಧಿವೇಶನದಲ್ಲಿ ಎಲ್ಲಾ ವಿಚಾರಗಳ ಕುರಿತು ಚರ್ಚೆಗೆ ಅವಕಾಶ ಮಾಡಿಕೊಡಲಾಗುತ್ತದೆ. ಜನರ ಸಮಸ್ಯೆಗಳ ಪ್ರಾಮಾಣಿಕ ಚರ್ಚೆ ನಡೆಸಬೇಕಿದೆ. ಹೀಗಾಗಿ, ಎಲ್ಲರೂ ಕಲಾಪದಲ್ಲಿ ಭಾಗಿಯಾಗಬೇಕು, ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡಬೇಕೆಂದು ಹೇಳಿದರು.

error: Content is protected !!
Scroll to Top