ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ನ. 25. ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗಗಳ ವಾರ್ಷಿಕ ಕ್ರೀಡಾಕೂಟವು ವಿದ್ಯುಕ್ತವಾಗಿ ಶಾಲಾ ಕ್ರೀಡಾಂಗಣದಲ್ಲಿ ನೆರವೇರಿತು.

ಎಡಮಂಗಲ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಅಬ್ದುಲ್ ಖಾದರ್ ಮುಖ್ಯ ಅತಿಥಿಯಾಗಿ ಆಗಮಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈಯಲು ನಿರಂತರ ಪರಿಶ್ರಮ ಹಾಗೂ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು. ಆಧುನಿಕ ಸಮಾಜದಲ್ಲಿ ಕ್ರೀಡೆ ಕೇವಲ ಹವ್ಯಾಸ, ಮನೋರಂಜನೆಗಾಗಿ ಮಾತ್ರವಲ್ಲ, ಅದು ನಮ್ಮ ಜೀವನವನ್ನು ರೂಪಿಸುವ ಮಾರ್ಗವಾಗಿದೆ.‌ ಯುವ ಕ್ರೀಡಾಪಟುಗಳು ಆರೋಗ್ಯಯುತ ಆಹಾರ ಪದ್ಧತಿಯನ್ನು ರೂಢಿಸಿಕೊಂಡು ಕ್ರೀಡಾ ಕ್ಷೇತ್ರದಲ್ಲಿ ಬೆಳೆಯಬೇಕೆಂದು ಅವರು ಹೇಳಿದರು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ವಂ.ಪ್ರಕಾಶ್ ಪಾವ್ಲ್ ಡಿ’ಸೋಜಾ ಅವರು ಸಂಸ್ಥೆಯ ಧ್ವಜಾರೋಹಣ ನೆರವೇರಿಸಿ, ಕ್ರೀಡೆ ಕಲಿಸುವ ಶಿಸ್ತು ಹಾಗೂ ಜೀವನ ಪಾಠಗಳನ್ನು ಅಳವಡಿಸಿಕೊಂಡು ನಡೆದಾಗ ವಿದ್ಯಾರ್ಥಿಯ ಸರ್ವಾಂಗೀಣ ಬೆಳವಣಿಗೆ ಸಾಧ್ಯ ಎಂದು ಹೇಳಿ ಕ್ರೀಡಾಪಟುಗಳಿಗೆ ಶುಭಹಾರೈಸಿದರು. ವಿದ್ಯಾರ್ಥಿ ನಾಯಕ ಮನ್ವಿತ್ ಕೆ ಮುಖಂಡತ್ವದಲ್ಲಿ ಆಕರ್ಷಕ ಪಥಸಂಚಲನ ನಡೆಯಿತು. ಕ್ರೀಡಾ ನಾಯಕ ಮಹಮದ್ ಕನ್ಝ್ ಪ್ರಮಾಣವಚನ ಬೋಧಿಸಿದರು.

Also Read  ನೆಲ್ಯಾಡಿ ಕಾರು ಕಳ್ಳತನ

ಉದ್ಘಾಟನಾ ಕಾರ್ಯಕ್ರಮದಲ್ಲಿ ಸೈಂಟ್ ಜೋಕಿಮ್ಸ್ ಚರ್ಚ್ ಪಾಲನಾ ಮಂಡಳಿಯ ಕಾರ್ಯದರ್ಶಿ ಜೆಸಿಂತಾ ವೇಗಸ್, ಸೇಂಟ್ ಆನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲಾ ಪ್ರಾಂಶುಪಾಲರಾದ ವಂ.ಅಮಿತ್ ಪ್ರಕಾಶ್ ರೋಡ್ರಿಗಸ್, ಸೈಂಟ್ ಆನ್ಸ್ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ದಕ್ಷಾ ಪ್ರಸಾದ್, ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಹಿಲ್ಡಾ ರೋಡ್ರಿಗಸ್, ರಕ್ಷಕ- ಶಿಕ್ಷಕ ಸಮಿತಿಯ ಉಪಾಧ್ಯಕ್ಷರುಗಳಾದ ಬಾಲಕೃಷ್ಣ ಬಿ, ವಾಚಣ್ಣ ಕೆರೆಮೂಲೆ ಹಾಗೂ ಈಶ್ವರ ಕೆ ಉಪಸ್ಥಿತರಿದ್ದರು. ಸೈಂಟ್ ಜೋಕಿಮ್ಸ್ ಕಾಲೇಜು ಪ್ರಾಂಶುಪಾಲರಾದ ಕಿರಣ್ ಕುಮಾರ್ ಸ್ವಾಗತಿಸಿ, ಸೈಂಟ್ ಜೋಕಿಮ್ಸ್ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಲತಾ ವಂದಿಸಿದರು. ಸೈಂಟ್ ಜೋಕಿಮ್ಸ್ ಕಾಲೇಜು ಉಪನ್ಯಾಸಕಿ ಮಮತಾ ಎಂ ಕಾರ್ಯಕ್ರಮ ನಿರೂಪಿಸಿದರು.

error: Content is protected !!
Scroll to Top