ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಅರೆಸ್ಟ್

(ನ್ಯೂಸ್ ಕಡಬ)newskadaba.com ಬಂಟ್ವಾಳ, ನ.25:  ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಗ್ರಾಮದ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕುಖ್ಯಾತ ಮೂವರು ಕಳ್ಳರ ತಂಡವನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಾಸರಗೋಡಿನ ಚೆರ್ವತ್ತೂರು ಗ್ರಾಮದ ಪಿಲಾವಲಪ್ಪು, ಕೋತಂಕರ ನಿವಾಸಿ ಬಶೀರ್ ಕೆ ಪಿ. ಯಾನೆ ಆಕ್ರಿ ಬಶೀರ್ (44), ಕೇರಳದ ಕೊಲ್ಲಂ ಜಿಲ್ಲೆಯ ಆಲಪ್ಪಾಡ್ ನ ಪ್ರಕಾಶ್ ಬಾಬು ಯಾನೆ ಮಹಮ್ಮದ್ ನಿಯಾಜ್(46) ಹಾಗೂ ಬಂಟ್ವಾಳ ತಾಲೂಕಿನ ಪುದು ಗ್ರಾಮ ನಿವಾಸಿ ಎಫ್.ಜೆ.ಮಹಮ್ಮದ್ ಇಸ್ಮಾಯಿಲ್ ಬಂಧಿತರು.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ವಿಶೇಷ ತನಿಖಾ ತಂಡ ಕಾರ್ಯಾಚರಣೆ ನಡೆಸಿ ಇರಾದಲ್ಲಿ ಈ ಮೂವರು ಖದೀಮರನ್ನು ಬಂಧಿಸಿದೆ. ಬಂಧಿತರಿಂದ 1.25 ಲಕ್ಷ ರೂ. ಮೌಲ್ಯದ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಂಧಿತರ ಪೈಕಿ ಬಶೀರ್ ಕೆ.ಪಿ. ಎಂಬಾತ ಕುಖ್ಯಾತ ಕಳ್ಳನಾಗಿದ್ದು, ಈತನ ವಿರುದ್ದ ಬೇರೆ ಬೇರೆ ಠಾಣೆಗಳಲ್ಲಿ ಸುಮಾರು 13 ಕಳ್ಳತನ ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿ ಪ್ರಕಾಶ್ ಬಾಬು ಯಾನೆ ಮಹಮ್ಮದ್ ನಿಯಾಝ್ ಎಂಬಾತನ ವಿರುದ್ಧ 3 ಕಳ್ಳತನ ಪ್ರಕರಣಗಳು ದಾಖಲಾಗಿರುತ್ತದೆ.

Also Read  ಪಿಯು ಮೌಲ್ಯಮಾಪನಕ್ಕೆ ತೆರಳದ ಮೌಲ್ಯಮಾಪಕರ ವಿರುದ್ದ ಕ್ರಮ

error: Content is protected !!
Scroll to Top