ಸಂಭಾಲ್ ಹಿಂಸಾಚಾರ: ಮೃತರ ಸಂಖ್ಯೆ 4ಕ್ಕೆ ಏರಿಕೆ..!

(ನ್ಯೂಸ್ ಕಡಬ)newskadaba.com  ಉತ್ತರಪ್ರದೇಶ, ನ.25. ಸಂಭಾಲ್ ನ ಜಾಮಾ ಮಸೀದಿಯ ಆವರಣದಲ್ಲಿ ಸಮೀಕ್ಷೆ ವಿರೋಧಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಘಟನೆಯಲ್ಲಿ ಮೃತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

ಹಿಂಸಾಚಾರದ ಹಿನ್ನೆಲೆ ಜಿಲ್ಲಾಡಳಿತ ಸಂಭಾಲ್ ನಲ್ಲಿ 24 ಗಂಟೆಗಳ ಕಾಲ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ ಮತ್ತು ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿದೆ. ನ.30ರವರೆಗೆ ಸಂಭಾಲ್ ಗೆ ಹೊರಗಿನವರು ಅಧಿಕಾರಿಗಳ ಆದೇಶವಿಲ್ಲದೆ ಸಂಭಾಲ್ ಗೆ ಪ್ರವೇಶಿಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ.

Also Read  ಮಂಗಳೂರು: ಮನೆ ಗೋಡೆ ಕುಸಿದು ಇಬ್ಬರು ಮೃತ್ಯು

 

error: Content is protected !!
Scroll to Top