ಕರ್ನಾಟಕದ 3 ರೈಲ್ವೆ ನಿಲ್ದಾಣಗಳಿಗೆ ಮರುನಾಮಕರಣ

(ನ್ಯೂಸ್ ಕಡಬ)newskadaba.com ಬೆಂಗಳೂರು, ನ.25. ಕರ್ನಾಟಕದ 3 ರೈಲ್ವೆ ನಿಲ್ದಾಣಗಳಿಗೆ ಮರುನಾಮಕರಣ ಮಾಡಲು ನಿರ್ಧಾರ ಮಾಡಲಾಗಿದೆ. ಹೊಸದಾಗಿ ನಿಲ್ದಾಣಗಳಿಗೆ ಅಂಜನಾದ್ರಿ, ಹುಲಿಗೆಮ್ಮ, ಮಹಾತ್ಮಗಾಂಧಿ ಹೆಸರು ಶಿಫಾರಸು ಮಾಡಲಾಗಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ, ಮುನಿರಾಬಾದ್‌ ಮತ್ತು ಭಾನಾಪುರ ರೈಲ್ವೆ ನಿಲ್ದಾಣಗಳಿಗೆ ಕ್ರಮವಾಗಿ ಅಂಜನಾದ್ರಿ (ಕಿಷ್ಕಿಂಧಾ), ಹುಲಿಗೆಮ್ಮ ದೇವಿ ಮತ್ತು ಮಹಾತ್ಮ ಗಾಂಧಿ ರೈಲು ನಿಲ್ದಾಣ ಎಂದು ಮರುನಾಮಕರಣ ಮಾಡಬೇಕೆಂದು ಶಿಫಾರಸು ಮಾಡಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್‌ ತಿಳಿಸಿದ್ದಾರೆ.

Also Read  ಅರಂತೋಡು: ಪ್ರವಾದಿ ಪೈಗಂಬರರ ಜನ್ಮದಿನಾಚರಣೆ ಪ್ರಯುಕ್ತ ಮದರಸ, ವಿದ್ಯಾರ್ಥಿಗಳಿಂದ ಕಲಾ ಸಾಹಿತ್ಯಕ್ಕೆ ಚಾಲನೆ

 

error: Content is protected !!
Scroll to Top