ಲಕ್ನೋ: ತಪ್ಪಾದ ನಕ್ಷೆ ತೋರಿಸಿ ಮೂವರ ಬಲಿ ತೆಗೆದುಕೊಂಡ ಗೂಗಲ್ ಮ್ಯಾಪ್!

(ನ್ಯೂಸ್ ಕಡಬ)newskadaba.com  ಲಕ್ನೋ, ನ.25:  ಗೂಗಲ್​ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಕಾರಿನ ಚಾಲಕ ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸುತ್ತಿದ್ದ, ಜತೆ ಆತನ ಸ್ನೇಹಿತರು ಕೂಡ ಇದ್ದರು.

ಗೂಗಲ್ ತೋರಿಸಿದ್ದನ್ನು ನಂಬಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು ಹತ್ತಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ಸೇತುವೆ ಕಾಮಗಾರಿ ಅಲ್ಲಿಗೇ ನಿಂತಿದೆ ಅವರಿಗೆ ಇದು ಕಂಡಿಲ್ಲ, ಅಲ್ಲಿಂದ ನೇರವಾಗಿ ಕಾರು ಕೆಳಗಿರುವ ನದಿಗೆ ಬಿದ್ದ ಪರಿಣಾಮ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.ಕಾರು 50 ಅಡಿ ಎತ್ತರದಿಂದ ರಾಮಗಂಗಾ ನದಿಗೆ ಬಿದ್ದಿದೆ.ಉತ್ತರ ಪ್ರದೇಶದ ಬರೇಲಿ ಮತ್ತು ಬುಡೌನ್ ಜಿಲ್ಲೆಗಳ ನಡುವಿನ ಗಡಿಯಲ್ಲಿರುವ ಫರೀದ್‌ಪುರ ಮತ್ತು ದತಗಂಜ್‌ಗೆ ಸಂಪರ್ಕ ಕಲ್ಪಿಸುವ ರಾಮಗಂಗಾ ನದಿಯ ಮೇಲಿನ ಅಪೂರ್ಣ ಸೇತುವೆಯಿಂದ ಕಾರು ಉರುಳಿ ಬಿದ್ದ ಪರಿಣಾಮ ಮೂವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

Also Read  ಅಕ್ಟೋಬರ್ 16ರ ವರೆಗೆ ಶಾಲಾ ದಾಖಲಾತಿ ವಿಸ್ತರಿಸಿ ಆದೇಶ

error: Content is protected !!
Scroll to Top