ನಾಳೆ ಸಂವಿಧಾನ ದಿನಾಚರಣೆ, ಎಲ್ಲ ಶಾಲಾ-ಕಾಲೇಜು, ಕಚೇರಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ

(ನ್ಯೂಸ್ ಕಡಬ)newskadaba.com  ಬೆಂಗಳೂರು, ನ.25:  ನಾಳೆ  ಸಂವಿಧಾನ ದಿನಾಚರಣೆ ಆಗಿದ್ದು, ಈ ಸಂದರ್ಭದಲ್ಲಿ ಸಂವಿಧಾನ ಕರ್ತೃ ಡಾ.ಬಿ.ಆರ್ ಅಂಬೇಡ್ಕ‌ರ್‌  ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಿರುವಂತೆ, ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

Also Read  ಮಾಂಸದಂಗಡಿ ಮಾಲೀಕನ ಮೇಲೆ ತಲವಾರು ದಾಳಿ ಪ್ರಕರಣ ➤ ಮೂವರು ಶಂಕಿತ ಆರೋಪಿಗಳು ವಶಕ್ಕೆ

error: Content is protected !!
Scroll to Top