(ನ್ಯೂಸ್ ಕಡಬ)newskadaba.com ಉತ್ತರಪ್ರದೇಶ, ನ.25: ಉತ್ತರ ಪ್ರದೇಶದ ಸಂಭಾಲ್ನಲ್ಲಿ ಮಸೀದಿ ಸಮೀಕ್ಷೆ ಕುರಿತು ಭಾನುವಾರ ಭುಗಿಲೆದ್ದಿರುವ ಹಿಂಸಾಚಾರ ಆತಂಕ ಹೆಚ್ಚಿಸಿದ್ದು, ಘಟನೆಯಲ್ಲಿ ನಾಲ್ಕು ಮಂದಿ ಹತ್ಯೆಯಾಗಿದ್ದ, 20 ಪೊಲೀಸರು ಸೇರಿದಂತೆ ಅನೇಕರು ಗಾಯಗೊಂಡಿದ್ದಾರೆ.
ಮುಂಜಾಗೃತಾ ಕ್ರಮವಾಗಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಶಾಲೆಗಳನ್ನು ಮುಚ್ಚಲಾಗಿದೆ. ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ಸಮೀಕ್ಷೆಯು ಸ್ಥಳೀಯರು ಮತ್ತು ಪೊಲೀಸರ ನಡುವೆ ಭಾನುವಾರ ಬೆಳಿಗ್ಗೆ ಸಂಭಾಲ್ನಲ್ಲಿ ಘರ್ಷಣೆ ಕಾರಣವಾಗಿತ್ತು. ಇನ್ನು ಘರ್ಷಣೆಯಲ್ಲಿ 20ಕ್ಕೂ ಹೆಚ್ಚು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಕುರಿತು ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದರ್ ಪೆನ್ಸಿಯಾ ಪ್ರತಿಕ್ರಿಯಿಸಿದ್ದು, ಪ್ರತಿಭಟನಾಕಾರರು ಕೆಲವು ವಾಹನಗಳಿಗೆ ಬೆಂಕಿ ಹಚ್ಚಿ ಪೊಲೀಸರ ಮೇಲೆ ಕಲ್ಲು ಎಸೆದರು. ಇನ್ನು ಗುಂಪು ಚದುರಿಸಲು ಅಶ್ರುವಾಯು ಸಿಡಿಸಿ ಲಾಠಿಚಾರ್ಜ್ ನಡೆಸಿದ್ದರು. ಈ ಗಲಾಟೆಯಲ್ಲಿ ಸುಮಾರು 20 ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ. ತಲೆಗೆ ಪೆಟ್ಟಾಗಿರುವ ಕಾನ್‌್ಸಟೇಬಲ್ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಇಬ್ಬರು ಮಹಿಳೆಯರು ಸೇರಿದಂತೆ 21 ಜನರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.