ಕುತ್ತಾರು: ಕೊರಗಜ್ಜನ ಆದಿಸ್ಥಳದಲ್ಲಿ ಸುಸಜ್ಜಿತ ಪಾರ್ಕಿಂಗ್, ಶೌಚಾಲಯ, ವಿಶ್ರಾಂತಿ ಕೊಠಡಿ ಉದ್ಘಾಟನೆ

(ನ್ಯೂಸ್ ಕಡಬ)newskadaba.com  ಉತ್ತರಪ್ರದೇಶ, ನ.25:  ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳದಲ್ಲಿ ಜಿಲ್ಲೆ, ಹೊರಜಿಲ್ಲೆ ಹಾಗೂ ಹೊರರಾಜ್ಯಗಳಿಂದ ಬರುವ ಭಕ್ತಾಧಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ನಿರ್ಮಿಸಲಾದ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ, ವಿಶ್ರಾಂತಿ ಕೊಠಡಿ, ಶೌಚಾಲಯಗಳ ಉದ್ಘಾಟನೆ ಸೋಮವಾರ ನಡೆಯಿತು.

ಆದಿಸ್ಥಳದ ಸಮೀಪದಲ್ಲೇ ನಿರ್ಮಿಸಲಾದ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆಯನ್ನು ತುಂಗಾ ಗ್ರೂಪ್ ಆಫ್ ಹೊಟೇಲ್ಸ್ ಇದರ ಅಧ್ಯಕ್ಷ ಸುಧಾಕರ್ ಹೆಗ್ಡೆ ಉದ್ಘಾಟಿಸಿದರು. ನೂತನ ಬಸ್ ನಿಲ್ದಾಣವನ್ನು ಹಿರಿಯ ಸಾಮಾಜಿಕ ಹಾಗೂ ಧಾರ್ಮಿಕ ಮುಂದಾಳು ವಿವೇಕ್ ಶೆಟ್ಟಿ ಬೊಳ್ಯಗುತ್ತು ಉದ್ಘಾಟಿಸಿದರು. ವಿಶ್ರಾಂತಿ ಕೊಠಡಿಗಳನ್ನು ಕುತ್ತಾರು ದೆಕ್ಕಾಡುವಿನ ಶ್ರೀ ಪಂಜಂದಾಯ ಬಂಟ, ವೈದ್ಯನಾಥ ಮತ್ತು ಕೊರಗತನಿಯ ದೈವಗಳ ಅನುಮಂಶಿಕ ಆಡಳಿತ ಮೊಕ್ತೇಸರ ಮಾಗಣತ್ತಡಿ ಶ್ರೀಧರ್ ಶೆಟ್ಟಿ ಉದ್ಘಾಟಿಸಿದರು.

Also Read  ಫೆ.18 ರಂದು ಬಿಜೆಪಿಯ ಮಾಸ್ಟರ್ ಮೈಂಡ್ ಅಮಿತ್ ಷಾ ಸುಬ್ರಹ್ಮಣ್ಯಕ್ಕೆ...? ► ಕರಾವಳಿಯಲ್ಲಿ ಹೆಣೆಯುತ್ತಾರಾ ಕಾಂಗ್ರೆಸ್ ಮುಕ್ತ ಕರ್ನಾಟಕದ ರಣತಂತ್ರ

 

error: Content is protected !!
Scroll to Top