ರಂಗನತಿಟ್ಟು ಪಕ್ಷಿಧಾಮದಲ್ಲಿ ‘ಚಿಟ್ಟೆಪಾರ್ಕ್’ ನಿರ್ಮಾಣ – ಸಚಿವ ಈಶ್ವರ್ ಖಂಡ್ರೆ

(ನ್ಯೂಸ್ ಕಡಬ) newskadaba.com ಮಂಡ್ಯ, . 26. ಶ್ರೀರಂಗಪಟ್ಟಣ ರಂಗನತಿಟ್ಟು ಪಕ್ಷಿಧಾಮ, ಬನ್ನೇರುಘಟ್ಟದಲ್ಲಿ ಇರುವ ರೀತಿಯಲ್ಲೇ ಚಿಟ್ಟೆಪಾರ್ಕ್ ನಿರ್ಮಾಣ ಮಾಡಿ ಪ್ರವಾಸಿಗರಿಗೆ ಹೊಸ ಆಕರ್ಷಣೆ ಕಲ್ಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಂಗನತಿಟ್ಟು ಪಕ್ಷಿಧಾಮದಲ್ಲಿ ಸೋಮವಾರ ಮೂರು ಹೊಸ ವಿಹಾರ ದೋಣಿಗಳನ್ನು ಉದ್ಘಾಟಿಸಿ ತರುವಾಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪಕ್ಷಿಧಾಮಕ್ಕೆ ಬರುವ ಪ್ರವಾಸಿಗರಿಗೆ ಶೌಚಾಲಯ, ಪಾರ್ಕಿಂಗ್ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಮೂಲ ಸೌಕರ್ಯ ಒದಗಿಸಲು ಮತ್ತು ರಂಗನತಿಟ್ಟಿನ ಬಗ್ಗೆ ಹೆಚ್ಚಿನ ಪ್ರಚಾರ ಮಾಡಲು ಸೂಚನೆ ನೀಡಿದರು.

Also Read  ಅಕ್ಷರದಾಸೋಹ ಆಹಾರ ಸಾಮಾಗ್ರಿಗಳ ಸಾಗಾಣಿಕೆ – ಇ-ಟೆಂಡರ್ ಅರ್ಜಿ ಆಹ್ವಾನ

 

error: Content is protected !!
Scroll to Top