(ನ್ಯೂಸ್ ಕಡಬ) newskadaba.com ನವದೆಹಲಿ, ನ. 26. ದೇಶದಾದ್ಯಂತ ಇಂದು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ. 1949ರಲ್ಲಿ ಸಂವಿಧಾನ ರಚನಾ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನೆಪಿಗಾಗಿ ದೇಶ ಈ ದಿನವನ್ನು ಆಚರಿಸುತ್ತದೆ. 2015ರಿಂದ ಸಂವಿಧಾನ ದಿನ ಆಚರಣೆ ಆರಂಭವಾಯ್ತು. ಈ ಐತಿಹಾಸಿಕ ದಿನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿ ಹಲವು ಗಣ್ಯರು ಸಮಸ್ತ ಭಾರತೀಯರಿಗೆ ಸಂವಿಧಾನ ದಿನದ ಶುಭಾಶಯಗಳನ್ನು ತಿಳಿಸಿದ್ದಾರೆ. ಟ್ವೀಟ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಮಸ್ತ ಭಾರತೀಯರಿಗೆ ಸಂವಿಧಾನ ದಿನದ ಶುಭಾಶಯ ತಿಳಿಸಿದ್ದಾರೆ.
ಭಾರತೀಯ ಸಂವಿಧಾನದ 75 ನೇ ವಾರ್ಷಿಕೋತ್ಸವದ ಶುಭ ಸಂದರ್ಭದಲ್ಲಿ ದೇಶದ ಎಲ್ಲಾ ಜನತೆಗೆ ಸಂವಿಧಾನ ದಿನದ ಶುಭಾಶಯಗಳು ಎಂದು ಹೇಳಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರು ಪೋಸ್ಟ್ ಮಾಡಿ, ಸಂವಿಧಾನವು ‘ನ್ಯಾಯ ಮತ್ತು ಸಮಾನ ಹಕ್ಕುಗಳನ್ನು ಖಾತ್ರಿಪಡಿಸುವ ಮೂಲಕ ರಾಷ್ಟ್ರೀಯ ಏಕತೆ ಮತ್ತು ಸಮಗ್ರತೆಯ ಮಂತ್ರವಾಗಿದೆ’ ಎಂದು ಅವರು ದೃಢಪಡಿಸಿದರು. ಸಂವಿಧಾನ ದಿನದ ಶುಭಾಶಯಗಳು. ಇಂದು ಭಾರತವು ಸಂವಿಧಾನದ 75 ನೇ ವರ್ಷಾಚರಣೆಯನ್ನು ಅತ್ಯಂತ ಉತ್ಸಾಹದಿಂದ ಆಚರಿಸುತ್ತಿದೆ. ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ಸೇರಿದಂತೆ ಎಲ್ಲಾ ಸಂವಿಧಾನ ಶಿಲ್ಪಿಗಳ ಕೊಡುಗೆಯನ್ನು ಸ್ಮರಿಸುವುದಕ್ಕಾಗಿ, ಮೋದಿಯವರು ‘ಸಂವಿಧಾನ ದಿನ’ವನ್ನು ಆಚರಿಸಲು ಪ್ರಾರಂಭಿಸಿದರು.