ಉಡುಪಿ: ಜಾದೂಗಾರ ಕುದ್ರೋಳಿ ಗಣೇಶ್ ರವರ ‘ಮೈಂಡ್ ಮಿಸ್ಟರಿ ‘ ಪ್ರದರ್ಶನದ ಪೋಸ್ಟರ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಉಡುಪಿ, . 26. ಜಾದೂಗಾರ ಕುದ್ರೋಳಿ ಗಣೇಶ್ ರವರ ಹೊಸ ಪ್ರಯೋಗ ” ಮೈಂಡ್ ಮಿಸ್ಟರಿ ” ಪ್ರದರ್ಶನದ ಪೋಸ್ಟರ್ ಬಿಡುಗಡೆಯನ್ನು ಪ್ರಸಿದ್ದ ಉದ್ಯಮಿ ನಾಡೋಜ ಡಾ.ಜಿ.ಶಂಕರ್ ರವರು ಇಂದು ಉಡುಪಿಯಲ್ಲಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ.ಜಿ.ಶಂಕರ್ ಸದಾ ಹೊಸತನಗಳ ಮೂಲಕ ಜನಪ್ರಿಯರಾಗಿರುವ ಕುದ್ರೋಳಿ ಗಣೇಶ್ ಅಂತರರಾಷ್ಟ್ರೀಯವಾಗಿ ಚರ್ಚೆಯಲ್ಲಿರುವ ಮೆಂಟಲಿಸಮ್ ಕಲೆಯಲ್ಲಿ ನಿಪುಣರಾಗಿ ಈ ಕಲೆಯಲ್ಲಿ ಪಳಗಿರುವುದು ಮೆಚ್ಚತಕ್ಕ ವಿಚಾರ. ಈ ಕಲಾ ಪ್ರದರ್ಶನದ ಪ್ರಥಮ ಸಾರ್ವಜನಿಕ ಪ್ರದರ್ಶನವನ್ನು ಉಡುಪಿಯಲ್ಲಿ ಹಮ್ಮಿಕೊಂಡಿದ್ದು ಪ್ರೇಕ್ಷಕರಿಗೆ ಹೊಸ ಅನುಭವ ಸಿಗಲಿ ಎಂದು ಶುಭ ಹಾರೈಸಿದರು. ಜಾದೂಗಾರ ಕುದ್ರೋಳಿ ಗಣೇಶ್ ಕಾರ್ಯಕ್ರಮದ ವಿಶೇಷತೆಯ ಬಗ್ಗೆ ವಿವರಿಸಿದರು. ಮೈಂಡ್ ರೀಡಿಂಗ್, ಟೆಲಿಪತಿ , ನ್ಯೂರೋ ಲಿಂಗ್ವಿಸ್ಟಿಕ್ ಪ್ರೋಗ್ರಾಮಿಂಗ್, ಸಮ್ಮೊಹಿನಿ ಮುಂತಾದ ಸುಪ್ತ ಮನಸ್ಸಿನ ಶಕ್ತಿಯ ರಂಗ ರೂಪಾತ್ಮಕ ಪ್ರಯೋಗವೇ ಮೈಂಡ್ ಮಿಸ್ಟರಿ. ಆಷ್ಟ್ರೇಲಿಯಾ,ಕಿನ್ಯಾ,ದುಬಾಯಿ,ಕತಾರ್ ಮುಂತಾದ ದೇಶಗಳಲ್ಲಿ ಈ ಪ್ರಯೋಗ ನೀಡಿದ್ದು ಇದೇ ಮೊದಲ ಪಾಲಿಗೆ ಉಡುಪಿಯಲ್ಲಿ ಸಾರ್ವಜನಿಕ ಪ್ರದರ್ಶನ ನೀಡುತ್ತಿದ್ದೇನೆ ಎಂದು ತಿಳಿಸಿದರು.

Also Read  ರಾಜ್ಯ ಸರ್ಕಾರದಿಂದ 8 'KAS' ಅಧಿಕಾರಿ, 39 ತಹಶೀಲ್ದಾರ್ ಗಳ ವರ್ಗಾವಣೆ

 

 

error: Content is protected !!
Scroll to Top