RBI ಗವರ್ನರ್‌ ಶಕ್ತಿಕಾಂತ್​ ದಾಸ್​ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಚೆನ್ನೈ, . 26. ಭಾರತೀಯ ರಿಸರ್ವ್​ ಬ್ಯಾಂಕ್​ನ ಗವರ್ನರ್ ಶಕ್ತಿಕಾಂತ್​ ದಾಸ್​ಗೆ ಅನಾರೋಗ್ಯ ಉಂಟಾಗಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

ಶಕ್ತಿಕಾಂತ್ ದಾಸ್​ ಅವರಿಗೆ ಆ್ಯಸಿಡಿಟಿ ಸಮಸ್ಯೆಯಾಗಿದ್ದು, ಅವರು ಆರೋಗ್ಯವಾಗಿದ್ದಾರೆ, ಮುಂದಿನ 23 ಗಂಟೆಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅವರನ್ನು RBI ಗವರ್ನರ್‌ ಆಗಿ ಮೂರು ವರ್ಷದ ಅವಧಿಗೆ ಕೇಂದ್ರ ಸರ್ಕಾರ 2021ರಲ್ಲಿ ಮರು ನೇಮಕ ಮಾಡಿತ್ತು. 2018ರ ಡಿಸೆಂಬರ್‌ನಲ್ಲಿ RBI ಗವರ್ನರ್‌ ಆಗಿ ನೇಮಕಗೊಂಡಿದ್ದರು. ಇದೇ ಡಿಸೆಂಬರ್‌ಗೆ ಅವರ ಅಧಿಕಾರವಧಿ ಮುಕ್ತಾಯವಾಗಲಿದ್ದ ಹಿನ್ನೆಲೆಯಲ್ಲಿ ಅವರನ್ನು ಮರುನೇಮಕ ಮಾಡಲಾಗಿತ್ತು. ಎನ್‌ಡಿಎ ಸರ್ಕಾರದಲ್ಲಿ ಎರಡನೇ ಬಾರಿಗೆ RBI ಗವರ್ನರ್‌ ಆಗಿ ನೇಮಕಗೊಂಡ ಮೊದಲ ವ್ಯಕ್ತಿ ಶಕ್ತಿಕಾಂತ ದಾಸ್ ಆಗಿದ್ದಾರೆ.

Also Read  ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಅರ್ಜಿ ಆಹ್ವಾನ

 

error: Content is protected !!
Scroll to Top