ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯ ದರ್ಶನ ಪಡೆದ ನಟ ಸೂರ್ಯ, ಜ್ಯೋತಿಕಾ ದಂಪತಿ

(ನ್ಯೂಸ್ ಕಡಬ) newskadaba.com ಉಡುಪಿ, . 26. ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ಕಾಲಿವುಡ್ ಕ್ಯೂಟ್ ಜೋಡಿ ಸೂರ್ಯ ಹಾಗೂ ಜ್ಯೋತಿಕಾ ಆಗಮಿಸಿದ್ದಾರೆ. ತಮಿಳು ಸಿನಿಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರೋ ಸೂರ್ಯ ಹಾಗೂ ಜ್ಯೋತಿಕಾ ಉಡುಪಿ ಜಿಲ್ಲೆ ಬೈಂದೂರಿನ ಕೊಲ್ಲೂರಿಗೆ ಭೇಟಿ ಕೊಟ್ಟಿದ್ದಾರೆ.

ದೇಗುಲದಲ್ಲಿ ನಡೆಸುವ ವಿಶೇಷ ಚಂಡಿಕಾಯಾಗದಲ್ಲಿ ಭಾಗಿಯಾಗಿ, ದೇವರ ದರ್ಶನ ಪಡೆದರು. ಶಕ್ತಿ ದೇವತೆ ಮೂಕಾಂಬಿಕೆಗೆ ವಿಶೇಷ ಸೇವೆ ಸಲ್ಲಿಕೆ ಮಾಡಿ ತೆರಳಿದ್ದಾರೆ. ಈ ವೇಳೆ, ನೆಚ್ಚಿನ ಜೋಡಿ ಸೂರ್ಯ ದಂಪತಿ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.

Also Read  ಶಾಲೆಯ ಕಾವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ

 

error: Content is protected !!
Scroll to Top