ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ-ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ, ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, . 27.  ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಇದರ ಪರಿಣಾಮ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಭಾರೀ ಮಳೆ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಬೆಂಗಳೂರಿನಲ್ಲೂ ನಿನ್ನೆ ಮಂಗಳವಾರದಿಂದ ಮೋಡ ಕವಿದ ವಾತಾವರಣವಿದೆ.ಇಂದು ಬೆಳಗ್ಗೆ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಚಳಿಯ ಜೊತೆ ಮಳೆಯ ಮುನ್ಸೂಚನೆಯಿದೆ.

ತಮಿಳುನಾಡಿನ ಮೈಲಾಡುತುರೈ, ನಾಗಪಟ್ಟಣಂ, ತಿರುವಾರುರ್​​ ಮತ್ತು ಕರೈಕಲ್​ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಪ್ರಾದೇಶಿಕ ಹವಾಮಾನ ಕೇಂದ್ರ ರೆಡ್​ ಅಲರ್ಟ್​ ನೀಡಿದೆ. ಜೊತೆಗೆ ಕಡಲೂರು, ಮಯಿಲದುತ್ತುರೈ ಮತ್ತು ಕರೈಕಲ್​ ಜಿಲ್ಲೆಗಳಲ್ಲಿ ಬುಧವಾರದವರೆಗೂ ರೆಡ್​ ಅಲರ್ಟ್​ ಘೋಷಿಸಲಾಗಿದೆ.

Also Read  BIG NEWS: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ..? ➤ ಅಂತಿಮ ಆದೇಶ ಬಾಕಿ..

error: Content is protected !!
Scroll to Top