ಪಾರ್ಕ್ ಗಳಲ್ಲಿ ನಾಯಿಗಳ ಮಲ ವಿಸರ್ಜನೆಗೆ ಕಾರಣವಾಗುವವರಿಗೆ ಹೆಚ್ಚಿನ ದಂಡ ವಿಧಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, . 27.  ನಗರದಲ್ಲಿನ ಉದ್ಯಾನವನಗಳ ಸ್ವತ್ಛತೆ ಕಾಯ್ದುಕೊಳ್ಳುವುದು ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಉದ್ಯಾನವನಗಳಲ್ಲಿ ನಾಯಿಗಳ ಮಲ ವಿಸರ್ಜನೆಗೆ ಕಾರಣವಾಗುವವರಿಗೆ ಹೆಚ್ಚಿನ ದಂಡ ವಿಧಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ಉದ್ಯಾನವನ ಪ್ರದೇಶ ಮತ್ತು ಅದರ ಆವರಣದಲ್ಲಿ ಉಗುಳುವುದು, ಕಸವನ್ನು ಎಸೆಯಿವುದು, ಸಾಕು ಪ್ರಾಣಿಗಳ ಮಲ ವಿಸರ್ಜನೆಗೆ ಅವಕಾಶ ಮಾಡುವವರನ್ನು ನಿಯಂತ್ರಿಸಿ ಸ್ವಚ್ಛತೆಯನ್ನು ಕಾಯ್ದುಕೊಳ್ಳುವುದು ಮತ್ತು ಅದನ್ನು ಉಲ್ಲಂಸುವವರ ವಿರುದ್ಧ ದಂಡವನ್ನು ವಿಧಿಸುವ ಕಾರ್ಯವನ್ನು ತೋಟಗಾರಿಕೆ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳ ಜವಾಬ್ದಾರಿಯಾಗಿರಲಿದೆ. ಆದರೆ, ತೋಟಗಾರಿಕೆ ಇಲಾಖೆ, ಬಿಬಿಎಂಪಿ ಅಧಇಕಾರಿಗಳು, ಸಿಬ್ಬಂದಿ ಈ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಜನರಿಂದ 1288 ದೂರು ದಾಖಲಾಗಿವೆ. ಈ ವಾದವನ್ನು ಪರಿಗಣಿಸಿದ ನ್ಯಾಯಪೀಠ, ನಾಯಿಗಳ ವಿಕೃತ ನಡೆಯಿಂದ ಉದ್ಯಾನಕ್ಕೆ ಭೇಟಿ ನೀಡುವವರಿಗೆ ರಕ್ಷಣೆ ನೀಡಬೇಕಿದೆ. ಸಾರ್ವಜನಿಕ ಉದ್ಯಾನಗಳಲ್ಲಿ ಎಲ್ಲಾ ರೀತಿಯ ರೀತಿಯ ಸ್ವಚ್ಛತೆ ಕಾಯ್ದುಕೊಳ್ಳುವುದು ಸರ್ಕಾರ ಹಾಗೂ ಬಿಬಿಎಂಪಿ ಜವಾಬ್ದಾರಿಯಾಗಿದೆ ಎಂದು ಆದೇಶಿಸಿತು. ಅಲ್ಲದೆ, ಉದ್ಯಾನವನಗಳಲ್ಲಿ ಸಾಕುನಾಯಿ ಮಲ ಮಾಡಿಸುವ ಮಾಲೀಕರಿಗೆ ದಂಡ ವಿಧಿಸುವಂತೆ ಸೂಚನೆ ನೀಡಿತು.

Also Read  ಪ್ರಧಾನಿ ಮೋದಿ ರೋಡ್ ಶೋ..!    ➤ ದೂರು ನೀಡಿದ ವ್ಯಕ್ತಿ

error: Content is protected !!
Scroll to Top