ಡ್ರೈವಿಂಗ್‌ ನಲ್ಲೇ ನಿದ್ದೆಗೆ ಜಾರಿದ ಚಾಲಕ; ಲಾರಿಗೆ ಕಾರು ಡಿಕ್ಕಿ- ಐವರು ವೈದ್ಯರ ದುರ್ಮರಣ

(ನ್ಯೂಸ್ ಕಡಬ) newskadaba.com ಲಕ್ನೋ, ನ. 27.  ಡ್ರೈವಿಂಗ್‌ ವೇಳೆ ಚಾಲಕ ನಿದ್ದೆಗೆ ಜಾರಿದ ಪರಿಣಾಮವಾಗಿ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಐವರು ವೈದ್ಯರು ದುರ್ಮರಣಕ್ಕೀಡಾಗಿದ್ದಾರೆ. ಇಂದು ಮುಂಜಾನೆ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಒಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಅಪಘಾತಕ್ಕೀಡಾದವರು ಉತ್ತರ ಪ್ರದೇಶದ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ವಿಭಾಗದಲ್ಲಿನ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ಲಕ್ನೋದಲ್ಲಿ ನಡೆದ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಲಾರಿಗೆ ಸ್ಕಾರ್ಪಿಯೋ ಕಾರು ಡಿಕ್ಕಿ ಹೊಡೆದಿತ್ತು ಎನ್ನಲಾಗಿದೆ.

Also Read  ದಾನಿಗಳ ಸಹಾಯದಿಂದ ಚೇತರಿಸಿಕೊಂಡ ಬಡ ಜೀವ ➤ ಕೃತಜ್ಞತೆ ಸಲ್ಲಿಸಿದ ಹೆತ್ತಕರುಳು

ಮುಂಜಾನೆ 3.30ರ ಸುಮಾರಿಗೆ ಅವರು ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋ ಎಸ್‌ಯುವಿ ನಿಯಂತ್ರಣ ತಪ್ಪಿ ಡಿವೈಡರ್‌ ಮುರಿದು ಎದುರುಗಡೆಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಕಾರನ್ನು ಚಲಾಯಿಸುತ್ತಿದ್ದ ವ್ಯಕ್ತಿಯು ನಿದ್ರೆಗೆ ಜಾರಿದ್ದ ಕಾರಣ ಅಪಘಾತ ನಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

error: Content is protected !!
Scroll to Top