ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಸಿವಿಲ್ ಕೇಸ್ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, . 27.  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉರುಳಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಮತ್ತೊಂದು ತಿರುವು ಪಡೆದುಕೊಂಡಿದೆ.

ಜಮೀನು ಮಾಲೀಕ ದೇವರಾಜು ವಿರುದ್ಧ ಅಣ್ಣನ ಮಗಳು ಜಮುನಾ ಮೈಸೂರಿನ ಜೆಎಂಎಫ್​ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. ಜಮುನಾ ಅವರು ದೇವಾರಜು ಅವರ ಅಣ್ಣ ಮೈಲಾರಯ್ಯ ಅವರ ಮಗಳು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರ ಹೆಸರಿನಲ್ಲಿರುವ ಜಮೀನು ದೇವರಾಜು ಅವರದ್ದು ಅಲ್ಲ, ಬದಲಿಗೆ ನಮ್ಮ ತಂದೆ ಮೈಲಾರಯ್ಯ ಅವರಿಗೆ ಸೇರಿದ್ದು ಎಂದು ಜಮುನಾ ದಾವೆ ಹೂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸೇರಿದಂತೆ 12 ಜನರ ಮೇಲೆ ಸಿವಿಲ್ ಕೇಸ್ ದಾಖಲಿಸಿದ್ದಾರೆ.

Also Read  ಮುಡಾ ಕೇಸ್| ರಾಜ್ಯಪಾಲರ ನಡೆ ಅಕ್ಷಮ್ಯ ಅಪರಾಧ ಸಚಿವ ದಿನೇಶ್ ಗುಂಡೂರಾವ್

error: Content is protected !!
Scroll to Top