ಬಂಟ್ವಾಳ: ಚತುಷ್ಪಥ ಹೆದ್ದಾರಿ ಕಾಮಗಾರಿ- ಬಿ.ಸಿ.ರೋಡು ಸರ್ಕಲ್ ಬಳಿ ಟ್ರಾಫಿಕ್ ಜಾಮ್

(ನ್ಯೂಸ್ ಕಡಬ) newskadaba.com ಬೆಂಗಳೂರು, . 27.  ಬಿ.ಸಿ.ರೋಡು-ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಕಾಮಗಾರಿಯ ಭಾಗವಾಗಿ ಬಿ.ಸಿ.ರೋಡು ಸರ್ಕಲ್ ಬಳಿ ಕಾಮಗಾರಿ ನಡೆಯುತ್ತಿವ ಹಿನ್ನೆಲೆಯಲ್ಲಿ ವಾಹನ ಸಂಚಾರದ ಪಥ ಬದಲಿಸಲಾಗಿತ್ತು. ಈ ಹಿನ್ನೆಲೆ ನ. 26ರ ಮಧ್ಯಾಹ್ನದ ವೇಳೆಗೆ ಸುಮಾರು 1 ಗಂಟೆಯ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಬಿ.ಸಿ.ರೋಡು ಸರ್ಕಲ್ ಬಳಿ ಕಾಮಗಾರಿಗಾಗಿ ಪದೇ ಪದೇ ಸಂಚಾರ ಪಥ ಬದಲಿಸಲಾಗುತ್ತಿದೆ. ಈ ಹಿನ್ನೆಲೆ ವಾಹನ ಚಾಲಕರಿಗೆ ಗೊಂದಲ ಉಂಟಾಗುತ್ತಿದೆ. ಪರಿಣಾಮ ಇಲ್ಲಿ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗುವಂತಾಗಿದೆ. ನ.26ರ ಬೆಳಗ್ಗಿನಿಂದ ಮತ್ತೆ ಸಂಚಾರದ ಪಥ ಬದಲಾವಣೆ ಮಾಡಲಾಗಿತ್ತು. ಮಧ್ಯಾಹ್ನದ ವೇಳೆ ರಾಷ್ಟ್ರೀಯ ಹೆದ್ದಾರಿ ಜೊತಗೆ ಧರ್ಮಸ್ಥಳ ಹೆದ್ದಾರಿ, ಬಂಟ್ವಾಳ ಪೇಟೆ ಸಂಪರ್ಕ ರಸ್ತೆಯಲ್ಲೂ ಟ್ರಾಫಿಕ್ ಜಾಮ್ ಉಂಟಾಯಿತು. ಇನ್ನು ಇದೇ ವೇಳೆ ಟಿಪ್ಪರೊಂದು ಕಾರಿಗೆ ಢಿಕ್ಕಿಯಾಗಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತು. ಆ ಬಳಿಕ ಸಂಚಾರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

Also Read  ಮೂಲಭೂತ ಸೌಕರ್ಯ ಒದಗಿಸದೆ ತೆರಿಗೆ ಏರಿಸಿ ಸಾರ್ವಜನಿಕರಿಗೆ ತೊಂದರೆ ➤ ಕಡಬ ಪಟ್ಟಣ ಪಂಚಾಯಿತಿ ವಿರುದ್ಧ ಕಡಬದಲ್ಲಿ ಪ್ರತಿಭಟನೆ

error: Content is protected !!
Scroll to Top