‘ನಿಮ್ಮ ಧರ್ಮ ಪಾಲನೆ ಮಾಡಿ, ಬೇರೆ ಧರ್ಮದ ಬಗ್ಗೆ ಸಹಿಷ್ಣುತೆ ಇರಲಿ’ – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬಳ್ಳಾರಿ, ನ. 27. ಕ್ರೈಸ್ತ ಧರ್ಮಕ್ಷೇತ್ರ ಅಮೃತೋತ್ಸವ ಹಿನ್ನೆಲೆಯಲ್ಲಿ ಬಳ್ಳಾರಿ ಆರೋಗ್ಯಮಾತೆ ಪುಣ್ಯಕ್ಷೇತ್ರದ ವೇದಿಕೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯರವರು  “ನಿಮ್ಮ ಧರ್ಮ ಪಾಲನೆ ಮಾಡಿ ಬೇರೆ ಧರ್ಮದ ಬಗ್ಗೆ ಸಹಿಷ್ಣುತೆ ಇರಲಿ” ಎಂದು ಮಾತನಾಡಿದರು.

ಅಂಬೇಡ್ಕರ್ ರವರು ಸಂವಿಧಾನದಲ್ಲಿ ನಿಮ್ಮ ಧರ್ಮ ಪಾಲನೆ ಮಾಡಿ ಬೇರೆ ಧರ್ಮದ ಬಗ್ಗೆ ಸಹಿಷ್ಣುತೆ ಇರಲಿ ಎಂದು ಹೇಳಿದ್ದಾರೆ. ಬೇರೆ ಧರ್ಮವನ್ನು ಸಹಿಸುವ ಸಹಿಷ್ಣುತೆ ಇರಬೇಕು. ಸ್ವಧರ್ಮ ಪಾಲನೆ ಮಾಡಿ ಅನ್ಯ ಧರ್ಮಕ್ಕೆ ಗೌರವ ನೀಡಬೇಕು. ಎಲ್ಲರನ್ನೂ ಗೌರವಿಸಿದರೆ ಅಂಬೇಡ್ಕರ್, ಸಂವಿಧಾನ ಮತ್ತು ಧರ್ಮ ಗುರುಗಳಿಗೆ ಗೌರವ ನೀಡಿದಂತೆ ಎಂದು ಹೇಳಿದರು. ಕೆಲವರು ಸಿದ್ದರಾಮಯ್ಯ ಮುಸಲ್ಮಾನರನ್ನು, ಕ್ರಿಶ್ಚಿಯನ್​ರನ್ನು ಓಲೈಸಿ, ಹಿಂದುಗಳನ್ನು ವಿರೋಧ ಮಾಡುತ್ತಾರೆ ಅಂತಾರೆ. ಅದೆಲ್ಲ ಸುಳ್ಳು ನಾನು ಎಲ್ಲರನ್ನೂ ಪ್ರೀತಿಸುತ್ತೇನೆ. ತಾರತಮ್ಯ, ಅಸಮಾನತೆ ಎಂಬುವುದು ನಮ್ಮಲ್ಲಿರುವ ಜಾತೀಯತೆಯಿಂದ ಬಂದಿದೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

Also Read  ಪ್ರಧಾನಿ ನರೇಂದ್ರ ಮೋದಿ ನಾಳೆ(ಡಿ.18) ಮಂಗಳೂರಿಗೆ ► ಡಿ.19 ರಂದು ಲಕ್ಷದ್ವೀಪಕ್ಕೆ

error: Content is protected !!
Scroll to Top