ಗ್ಯಾರಂಟಿ ಯೋಜನೆಗಳಿಂದ ಹಿಂದೆ ಸರಿಯುವುದಿಲ್ಲ: ಸಚಿವ ಪರಮೇಶ್ವರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 28. ಪರಮೇಶ್ವರ್ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಪಕ್ಷ ಮತ್ತು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಯಾರಿಗೂ ಗೊತ್ತಿಲ್ಲದೇ ಕದ್ದು ಮುಚ್ಚಿ ತೆಗೆದುಕೊಂಡಿರುವ ತೀರ್ಮಾನವೇನಲ್ಲ. ಚುನಾವಣೆಗೂ ಮೊದಲೇ ಪ್ರಣಾಳಿಕೆಯಲ್ಲಿ ತಿಳಿಸಲಾಗಿತ್ತು. ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಜನಸಮುದಾಯ ನಮ್ಮನ್ನು ನಂಬಿ ಮತ ಚಲಾಯಿಸಿರಬಹುದು. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನ ಮಾಡುವುದು ನಮ್ಮ‌ ಕರ್ತವ್ಯ. ನಮ್ಮ ನಮ್ಮ ಅಭಿಪ್ರಾಯಗಳು ಬೇರೆ ಇರಬಹುದು. ನಾವು ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳಬೇಕು. ಯಾವುದೇ ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ ಕೇಳುವುದರಲ್ಲಿ ತಪ್ಪಿಲ್ಲ,

Also Read  ಅಂಜನಾದ್ರಿ- ಪಂಪಾಸರೋವರದ ಬಳಿ ಚಿರತೆ, ಕರಡಿ ಪ್ರತ್ಯಕ್ಷ: ಪ್ರವಾಸಿಗರು ಆತಂಕ

ಯೋಜನೆಗಳ ಅನುಷ್ಠಾನದಲ್ಲಿ ತಡವಾಗುತ್ತಿರಬಹುದು. ಆದರೆ, ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಿಂತಿಲ್ಲ. ಹಿಂದಿನ ಸರ್ಕಾರವು ಲಕ್ಷಾಂತರ ಕೋಟಿ ರೂ. ಬಿಲ್‌ ಬಾಕಿ ಉಳಿಸಿ ಹೋಗಿತ್ತು. ಅದನ್ನೆಲ್ಲ ನಾವು ಭರಿಸಿದ್ದೇವೆ.‌ ಗ್ಯಾರಂಟಿ ಯೋಜನೆಗಳಿಗೆ ರೂ.56 ಸಾವಿರ ಕೋಟಿ ಹೆಚ್ಚುವರಿ ಖರ್ಚಾಗಿದೆ. ಬಜೆಟ್ ಅಮೌಂಟ್ ರೂ.3.27 ಲಕ್ಷ ಕೋಟಿ ಯಿಂದ, ರೂ.‌3.75 ಲಕ್ಷ ಕೋಟಿಗೆ ಹೆಚ್ಚಾಗಿದೆ. ಮುಂದಿನ ವರ್ಷಕ್ಕೆ ಗ್ಯಾರಂಟಿ ಯೋಜನೆಗಳಿಗೆ ಕೊಟ್ಟರೂ ಹೆಚ್ಚಿನ ಹಣ ದೊರಕುತ್ತದೆ ಎಂದು ಹೇಳಿದರು.

error: Content is protected !!
Scroll to Top