(ನ್ಯೂಸ್ ಕಡಬ) newskadaba.com ನವದೆಹಲಿ, ನ. 28. ಶಿವ ದೇವಾಲಯದ ಮೇಲೆ ಅಜ್ಮೀರ್ ದರ್ಗಾ ನಿರ್ಮಿಸಲಾಗಿದೆ ಎಂದು ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಅಜ್ಮೀರ್‌ನಲ್ಲಿರುವ ಸೂಫಿ ಸಂತ ಮೊಯಿನುದ್ದೀನ್ ಚಿಸ್ತಿ ಅವರ ದರ್ಗಾದಲ್ಲಿ ಶಿವ ದೇವಾಲಯವಿದೆ ಎಂದು ಅರ್ಜಿ ಸಲ್ಲಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಅಜ್ಮೀರ್‌ನ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಮತ್ತು ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ. ಸೆಪ್ಟೆಂಬರ್‌ನಲ್ಲಿ ಸಲ್ಲಿಸಲಾದ ಅರ್ಜಿಯಲ್ಲಿ, ಮತ್ತೆ ಸ್ಥಳದಲ್ಲಿ ಪೂಜೆಗೆ ಅವಕಾಶ ನೀಡುವಂತೆ ನ್ಯಾಯಾಲಯವನ್ನು ಕೋರಲಾಗಿದೆ.
Also Read ಕರಾವಳಿಯಲ್ಲಿ ಭಾರೀ ಗಾಳಿ - ಮಳೆಯಾಗುತ್ತಿರುವ ಹಿನ್ನೆಲೆ | ತುರ್ತು ಕ್ರಮಗಳಿಗಾಗಿ ಈ ಕ್ರಮಗಳನ್ನು ಅನುಸರಿಸಿ