ಸ್ವಾಮೀಜಿಗಳು ರಾಜಕೀಯದಿಂದ ದೂರವಿರುವುದು ಉತ್ತಮ: ಡಿ.ಕೆ.ಶಿವಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 28. ‘ಸ್ವಾಮೀಜಿಗಳು ರಾಜಕಾರಣದಿಂದ ದೂರ ಇರಬೇಕು. ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.

ಮುಸ್ಲಿಮರಿಗೆ ನೀಡಿರುವ ಮತದಾನದ ಹಕ್ಕು ಹಿಂಪಡೆಯಬೇಕು ಎಂಬ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರ ಶೇಖರ ಸ್ವಾಮೀಜಿ ಹೇಳಿಕೆಗೆ ಬುಧವಾರ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ‘ಸ್ವಾಮೀಜಿಗಳು ಇಂಥ ವಿವಾದಾತ್ಮಕ ಹೇಳಿಕೆ ನೀಡಬಾರದು. ಸಮಾಜದ ಶಾಂತಿ ಕೆಡಿಸುವ ಕೆಲಸ ಮಾಡಬಾರದು. ಅವರು ರಾಜಕಾರಣದಿಂದ ದೂರ ಇರುವುದು ಒಳಿತು. ಮತದಾನ ಎಂಬುದು ಸಂವಿಧಾನದ ಮೂಲಕ ಈ ದೇಶದ ಪ್ರತಿಯೊಬ್ಬ ಪ್ರಜೆಗೂ ಬಂದಿರುವ ಹಕ್ಕು. ಒಬ್ಬ ವ್ಯಕ್ತಿ ಜನಿಸಿದರೆ ಸಂವಿಧಾನದಿಂದ ಸಿಗುವ ಹಕ್ಕುಗಳಲ್ಲಿ ಇದು ಕೂಡ ಒಂದು’ ಎಂದರು.

Also Read  ➤ ಮದುವೆ ಸಮಾರಂಭದಲ್ಲಿ ಡ್ಯಾನ್ಸ್ ಮಾಡುತ್ತಿರುವಾಗ ಕುಸಿದು ಬಿದ್ದು ಯುವಕ ಮೃತ್ಯು..

error: Content is protected !!
Scroll to Top