ಸೆಂಟ್ರಲ್ ಜೈಲಿನ ಅಧೀಕ್ಷಕಿ ಕಾರು ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಕಳಿಸಿದ ದುಷ್ಕರ್ಮಿ

(ನ್ಯೂಸ್ ಕಡಬ) newskadaba.com ಕಲಬುರಗಿ, . 28. ಸೆಂಟ್ರಲ್ ಜೈಲಿನ ಅಧೀಕ್ಷಕಿ ಅನಿತಾ ಅವರ ಕಾರನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಯೊಬ್ಬ ಆಡಿಯೋ ಸಂದೇಶ ಕಳಿಸಿದ್ದಾನೆ ಎಂದು ವರದಿಯಾಗಿದೆ.

ಕಲಬುರಗಿ ನಗರದ ಪೊಲೀಸ್ ಇನ್ಸೆಪೆಕ್ಟರ್ ಮೊಬೈಲ್‍ಗೆ ಅನಾಮದೇಯ ವ್ಯಕ್ತಿಯಿಂದ ಬೆದರಿಕೆ ಸಂದೇಶ ಬಂದಿದೆ. ಈ ಮಾಹಿತಿಯನ್ನು ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಇದರಿಂದ ಅಲರ್ಟ್ ಆಗಿರುವ ಅಧಿಕಾರಿಗಳು ಕಾರನ್ನು ಸಿಸಿಟಿವಿ ಇರುವೆಡೆ ಮಾತ್ರ ಪಾರ್ಕ್ ಮಾಡುವಂತೆ ಕಾರು ಚಾಲಕನಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

 

error: Content is protected !!
Scroll to Top