(ನ್ಯೂಸ್ ಕಡಬ) newskadaba.com ಸವಣೂರು, ಮಾ.24. ಬೆಳಂದೂರು, ಕಾಣಿಯೂರು, ಸವಣೂರು, ಆಲಂಕಾರು ಗ್ರಾಮ ಪಂಚಾಯಿತಿಯ ಬಹುತೇಕ ಎಲ್ಲ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ನಿಟ್ಟಿನಲ್ಲಿ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಶಾಂತಿಮೊಗರು ಘಟಕಕ್ಕೆ ಶನಿವಾರ ಸುಳ್ಯ ಶಾಸಕ ಎಸ್. ಅಂಗಾರ ಶಿಲಾನ್ಯಾಸಗೈದರು. ಸುಮಾರು 7.5 ಕೋಟಿ ರೂ. ವೆಚ್ಚದ ಈ ಯೋಜನೆಗೆ ಶಿಲಾನ್ಯಾಸಗೈದು ಬಳಿಕ ಶಾಸಕರು ಮಾತನಾಡಿದರು.
ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅರ್ಚಕ ರಮಾನಂದ ಭಟ್ ಪೂಜಾ ವಿದಿವಿಧಾನ ನೆರವೇರಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ ಪ್ರಮೀಳಾ ಜನಾರ್ದನ, ಆಶಾ ತಿಮ್ಮಪ್ಪ ಗೌಡ, ತಾಲೂಕು ಪಂಚಾಯಿತಿ ಸದಸ್ಯೆ ಲಲಿತಾ ಈಶ್ವರ, ಬೆಳಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮೇಶ್ವರಿ ಅಗಳಿ, ಕಾಣಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೀತಮ್ಮ ಖಂಡಿಗ, ಚಾರ್ವಾಕ ಸಿಎ ಬ್ಯಾಂಕ್ ಅಧ್ಯಕ್ಷ ಧರ್ಮೆಂದ್ರ ಕಟ್ಟತ್ತಾರು, ಎಪಿಎಂಸಿ ನಿರ್ದೇಶಕ ದಿನೇಶ್ ಮೆದು, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ದಯಾನಂದ ಆಲಡ್ಕ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.