(ನ್ಯೂಸ್ ಕಡಬ) newskadaba.com ಬಜಪೆ, ನ. 29. ಹೆಜ್ಜೇನು ಕಡಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ದಿನಪತ್ರಿಕೆ ವಿತರಕರೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ನ. 28ರಂದು ಕೊನೆಯುಸಿರೆಳೆದಿದ್ದಾರೆ.

ಮೃತ ದುರ್ದೈವಿಯನ್ನು ಪೇಜಾವರ ಪಡ್ಡೋಡಿಯ ನಿವಾಸಿ, ದಿನಪತ್ರಿಕೆ ವಿತರಕ ಪುಷ್ಪಾರಾಜ ಶೆಟ್ಟಿ (45) ಎಂದು ಗುರುತಿಸಲಾಗಿದೆ. ಪುಷ್ಪಾರಾಜ ಅವರು ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೆಂಜಾರು ತಾಂಗಡಿಯಲ್ಲಿ ನ. 27ರ ಬೆಳಗ್ಗೆ ನಡೆದುಕೊಂಡು ಹೋಗುತ್ತಿದ್ದಾಗ ಅವರ ಮೇಲೆ ಹೆಜ್ಜೇನಿನ ಹಿಂಡು ದಾಳಿ ನಡೆಸಿತ್ತು. ಇದರಿಂದಾಗಿ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.














