ಮಂಗಳೂರು: ಪೊಲೀಸ್ ಕಮಿಷನರ್ ವರ್ಗಾವಣೆಗೊಳಿಸುವಂತೆ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, . 29. ಜನಪರ ಪ್ರತಿಭಟನೆಗಳನ್ನು ನಿರಾಕರಿಸಿ ಪ್ರಜಾಪ್ರಭುತ್ವದ ಹಕ್ಕುಗಳನ್ನು ದಮನಿಸುತ್ತಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್‌ ರನ್ನು ವರ್ಗಾವಣೆಗೊಳಿಸಬೇಕು ಎಂದು ಆಗ್ರಹಿಸಿ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಗುರುವಾರ ನಗರದ ಸ್ಟೇಟ್‌ಬ್ಯಾಂಕ್ ಸಮೀಪದ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ಪ್ರತಿಭಟನೆ ನಡೆಯಿತು.

ಹದಗೆಟ್ಟ ರಸ್ತೆಯನ್ನು ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಸಿಪಿಎಂ ದ.ಕ.ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಅವರ ವಿರುದ್ಧ ದಾಖಲಿಸಿದ ಪ್ರಕರಣವನ್ನು ಕೈ ಬಿಡಬೇಕು ಮತ್ತು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್‌ ಅವರನ್ನು ವರ್ಗಾವಣೆಗೊಳಿಸಬೇಕು ಎಂದು ಪ್ರತಿಭಟನೆಕಾರರು ಆಗ್ರಹಿಸಿದರು. ಅಲ್ಲದೆ ಪೊಲೀಸ್ ಆಯುಕ್ತರು ಮತ್ತು ರಾಜ್ಯ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನೆಕಾರರು, ಪೊಲೀಸರು ಸಂಘಿಗಳಂತೆ ವರ್ತಿಸಬಾರದು, ಕೇಸುಗಳ ಮೇಲೆ ಕೇಸು ಹಾಕಿದರೂ ನಾವು ಹೆದರುವುದಿಲ್ಲ, ತಾಕತ್ತಿದ್ದರೆ ನಮ್ಮನ್ನು ಬಂಧಿಸಿ ಎಂದು ಸವಾಲು ಹಾಕಿದರು ಎನ್ನಲಾಗಿದೆ.

Also Read  ಎಸ್ಕೆಎಸ್ಸೆಸ್ಸೆಫ್ ಮತ್ತು ಬ್ಲಡ್ ಡೋನರ್ಸ್ ಮಂಗಳೂರು ಸಹಭಾಗಿತ್ವ ► ಕಲ್ಲಡ್ಕದಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ

 

error: Content is protected !!
Scroll to Top