ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಚಾಮರಾಜನಗರ, . 29. ಶಾಲಾ ಮಕ್ಕಳು ಇರುವ ಆಟೋ ಮತ್ತು ಸ್ಕೂಟಿ ನಡುವೆ ರಸ್ತೆ ಅಪಘಾತವಾಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಹನೂರು ತಾಲ್ಲೂಕಿನ ಕಾಮಗೆರೆ ಸಮೀಪ ನಡೆದಿದೆ.

ಮೃತ ವಿದ್ಯಾರ್ಥಿ ಹನೂರು ತಾಲ್ಲೂಕಿನ ಮಂಗಲ ಗ್ರಾಮದ ವಿಮಲ್ ರಾಜ್ (10) ಎಂದು ಗುರುತಿಸಲಾಗಿದೆ. ಕಾಮಗೆರೆ ಗ್ರಾಮದ ಸೆಂಟ್ ಕ್ಲೇವಿಯರ್ ಶಾಲೆಗೆ 5 ನೇ ತರಗತಿ ವಿದ್ಯಾರ್ಥಿಯಾಗಿದ್ದ ಬಾಲಕ ಆಟೋದಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಅಪಘಾತ ನಡೆದು ಆಟೋ ಪಲ್ಟಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

 

Scroll to Top