ಯುವಕನ ಮೇಲೆ ಗುಂಡಿನ ದಾಳಿ: 3 ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಳಗಾವಿ, . 29. ನಗರದ ಕೆಎಂಎಫ್ ಡೈರಿ ಬಳಿ ಬುಧವಾರ ರಾತ್ರಿ ಯುವಕನ ಮೇಲೆ ಗುಂಡಿನ ದಾಳಿ ನಡೆಸಿದ್ದು ಆತನ ಮಾಜಿ ಪ್ರೇಯಸಿ ಎಂಬ ವಿಚಾರ ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯೂ ಸೇರಿದಂತೆ ಮಾಳಮಾರುತಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟಿಳಕವಾಡಿಯ ದ್ವಾರಕಾನಗರದ ಪ್ರವೀಣ ಕುಮಾರ (31) ಗುಂಡಿನ ದಾಳಿಗೆ ಒಳಗಾಗಿ ಬಿಮ್ಸ್‌ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಿಧಾ ಕಿತ್ತೂರು, ನಾಜಿಯಾ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

Also Read  ಉಳ್ಳಾಲ: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ

 

error: Content is protected !!
Scroll to Top