ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಇಲ್ಲ: ಡಿಸಿಎಂ ಡಿಕೆಶಿ

(ನ್ಯೂಸ್ ಕಡಬ) newskadaba.com ನ. 29. ನವ ದೆಹಲಿ: ಸಂಪುಟ ವಿಸ್ತರಣೆಯ ಸಂದರ್ಭ ಬಂದಾಗ ಆಗುತ್ತದೆ. ಈಗ ಆ ಸಂದರ್ಭ ಒದಗಿ ಬಂದಿಲ್ಲವಲ್ಲ. ಒಂದು ಸಚಿವ ಸ್ಥಾನ ಖಾಲಿ ಇದ್ದು ಅದನ್ನು ತುಂಬುವ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ತಿಳಿಸಿದರು.

ಸಂಪುಟ ವಿಸ್ತರಣೆ ಬಗ್ಗೆ ದೆಹಲಿಯ ಕರ್ನಾಟಕ ಭವನದಲ್ಲಿ ಡಿಸಿಎಂ ಪ್ರತಿಕ್ರಿಯಿಸಿದ್ದಾರೆ. ಇನ್ನು ಕೆಪಿಸಿಸಿ ಅಧ್ಯಕ್ಷ ಗಾದಿಗೆ ನಾನೂ ಆಕಾಂಕ್ಷಿ ಎನ್ನುವ ಸಚಿವ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜಾರಕಿಹೊಳಿ ಅವರ ಹೆಸರು ಮುನ್ನೆಲೆಗೆ ಬಂದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಮಾಧ್ಯಮಗಳ ಮುಂದೆ ಮಾಡುವ ಚರ್ಚೆಯಿಂದ ರಾಜಕಾರಣ ನಡೆಯುವುದಿಲ್ಲ, ಮಾಧ್ಯಮಗಳ ಮುಂದೆ ರಾಜಕೀಯ ಚರ್ಚೆ ಮಾಡುವುದು ಯಾವ ಪಕ್ಷದವರಿಗೂ ಹಾಗೂ ಯಾರಿಗೂ ಸೂಕ್ತವಾದುದಲ್ಲ ಎಂದು ಹೇಳಿದರು.

Also Read  ಕಡಬ : ಆ.12 ರ ಕೊರೋನಾ ಆಪ್‍ಡೇಟ್

 

error: Content is protected !!
Scroll to Top