ಅಕ್ರಮವಾಗಿ ಸಾಗಿಸುತ್ತಿದ್ದ 16 ಲಕ್ಷ ಮೌಲ್ಯದ ಶ್ರೀಗಂಧ ವಶಕ್ಕೆ: ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೀದರ್, . 29. ಜಿಲ್ಲೆಯ ಪೊಲೀಸರು ಹಾಗೂ ಅರಣ್ಯಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಸಾಗಿಸುತ್ತಿದ್ದ 16 ಲಕ್ಷ ಮೌಲ್ಯದ ಶ್ರೀಗಂಧವನ್ನು ವಶಕ್ಕೆ ಪಡೆದಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಈ ಘಟನೆ ಬಸವಕಲ್ಯಾಣ ತಾಲೂಕಿನ ಸಸ್ತಾಪೂರ್ ಬಂಗ್ಲಾ ಬಳಿ ನಡೆದಿದೆ.

ಆರೋಪಿಯನ್ನು ತೆಲಂಗಾಣ ಮೂಲದ ಪಿ.ಕೆ ಭದ್ರುಧಿನ್ ಎಂದು ಗುರುತಿಸಲಾಗಿದೆ ಗೂಡ್ಸ್ ವಾಹನದಲ್ಲಿ ಶ್ರೀಗಂಧವನ್ನು ಅಕ್ರಮವಾಗಿ ನೆರೆಯ ತೆಲಂಗಾಣದಿಂದ ಮಹಾರಾಷ್ಟ್ರದ ಮುಂಬೈ ನಗರಕ್ಕೆ ಸಾಗಾಟ ಮಾಡುತ್ತಿದ್ದರು. ಈ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿ ದಾಳಿ ನಡೆಸಿದ್ದು, ಬರೋಬ್ಬರಿ 16 ಲಕ್ಷ ಮೌಲ್ಯದ ಒಂದು ಕ್ವಿಂಟಾಲ್ ಶ್ರೀಗಂಧದ ತುಂಡುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

Also Read  ತ್ರಿವಳಿ ತಲಾಖ್ ಆರೋಪ ಪ್ರಕರಣ ದಾಖಲು.

 

error: Content is protected !!
Scroll to Top