KSRTC ಸಂಸ್ಥೆಯು 1,308 ನೌಕರರಿಗೆ ಅಂತರ ನಿಗಮ ವರ್ಗಾವಣೆ ಸೌಲಭ್ಯ

(ನ್ಯೂಸ್ ಕಡಬ) newskadaba.com . 29. ರಾಜ್ಯದಲ್ಲಿ ವಿವಿಧ ಜಿಲ್ಲೆ ಹಾಗೂ ಪ್ರದೇಶಗಳಿಂದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಹಲವು ವಿಭಾಗಗಳಲ್ಲಿ ನೌಕರಿಗೆ ಸೇರಿದ ಸಾರಿಗೆ ನಿಗಮದ ಸಿಬ್ಬಂದಿ ವಾಪಸ್ ತಮ್ಮ ಊರಿನತ್ತ ಹೋಗಲಾಗದೇ ಪರದಾಡುತ್ತಿದ್ದರು. ಇಂಥವರಿಗೆ ಮೊದಲ ಬಾರಿಗೆ ಅವಕಾಶ ಮಾಡಿಕೊಟ್ಟ ಕೆಎಸ್‌ಆರ್‌ಟಿಸಿ ಸಂಸ್ಥೆಯು ಈವರೆಗೆ 1,308 ನೌಕರರಿಗೆ ಅಂತರ ನಿಗಮ ವರ್ಗಾವಣೆ ಸೌಲಭ್ಯವನ್ನು ಒದಗಿಸಿದೆ.

ರಾಜ್ಯ ರಸ್ತೆ ಸಾರಿಗೆ ನಿಗಮದ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ 2023ರ ಜು.5ರಿಂದ ಡಿ.31ರ 2023ರವರೆಗೆ ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಸದರಿ ಅಂತರ ನಿಗಮ ವರ್ಗಾವಣೆಯಲ್ಲಿ ಈ ಕೆಳಗಿನಂತೆ ಮೀಸಲಾತಿ ಸೌಲಭ್ಯ ಕಲ್ಪಿಸಲಾಗಿದೆ. ಕೆಲವೊಂದು ವಿಶೇಷ ಪ್ರಕರಣಗಳನ್ನು ಪರಿಗಣಿಸಲು ಇಲ್ಲಿ ಅಂತರ ನಿಗಮ ವರ್ಗಾವಣೆಯನ್ನು ಮಾಡಿಕೊಡಲಾಗಿದೆ.

Also Read  ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ➤ಎಸ್‌ಪಿಬಿ ಪುತ್ರ ಚರಣ್ ರಿಂದ ಸಂದೇಶ ರವಾನೆ

 

error: Content is protected !!
Scroll to Top