ಬಾಂಗ್ಲಾದಲ್ಲಿ ಬಂಧಿಸಲ್ಪಟ್ಟ ಚಿನ್ಮಯ ಕೃಷ್ಣದಾಸ ಪ್ರಭು ಬಿಡುಗಡೆಗೆ ಒತ್ತಾಯಿಸಿ ಮಂಗಳೂರಿನಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ನ. 29. ಮಂಗಳೂರು:  ಬಾಂಗ್ಲಾದೇಶದಲ್ಲಿ ಬಂಧಿಸಲ್ಪಟ್ಟ ಧಾರ್ಮಿಕ ಮುಖಂಡ ಚಿನ್ಮಯ ಕೃಷ್ಣದಾಸ ಪ್ರಭು ಅವರನ್ನು ಬಿಡುಗಡೆಗೊಳಿಸಬೇಕು, ಬಾಂಗ್ಲಾದ ಹಿಂದೂಗಳಿಗೆ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಇಂದು ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ವಿಹೆಚ್ ಪಿ ಕರ್ನಾಟಕ ದಕ್ಷಿಣ ಪ್ರಾಂತ ಅಧ್ಯಕ್ಷ ಡಾ. ಎಂ.ಬಿ.ಪುರಾಣಿಕ್ ಅವರು, ಬಾಂಗ್ಲಾದಿಂದ ಹಿಂದೂಗಳನ್ನು ಹೊರ ದಬ್ಬುವ ಷಡ್ಯಂತ್ರ ನಡೆಯುತ್ತಿದೆ. ಜಗತ್ತಿನಲ್ಲಿ ಶಾಂತಿಗಾಗಿ ಹುಟ್ಟಿದ ಇಸ್ಕಾನ್ ಸಂಸ್ಥೆ ಜಗತ್ತಿನ ಜನರ ಪ್ರೀತಿ ಗಳಿಸಿದೆ. ಬಡವರ ಸೇವೆ ಮಾಡುತ್ತಿರುವ ಇಸ್ಕಾನ್ ನ ಸ್ವಾಮಿಗಳನ್ನು ಏನೂ ಕಾರಣ ಕೊಡದೆ ಬಾಂಗ್ಲಾದಲ್ಲಿ ಬಂಧಿಸಿದ್ದಾರೆ. ಅಲ್ಲಿನ ಸರ್ಕಾರ, ನ್ಯಾಯಾಲಯ ಅಲ್ಲಿನ ಅಲ್ಪಸಂಖ್ಯಾಕರಾದ ಹಿಂದೂಗಳ ವಿರೋಧಿಯಾಗಿದೆ. ಬಾಂಗ್ಲಾದ ಹಿಂದೂಗಳು ಶಾಂತಿಯಿಂದ ಬದುಕಲು ಅವಕಾಶ ನೀಡಬೇಕು. ಇಲ್ಲವಾದರೆ ಮುಂದಿನ ಪರಿಣಾಮಗಳಿಗೆ ಬಾಂಗ್ಲಾ ಸರ್ಕಾರವೇ ಹೊಣೆಯಾಗುತ್ತದೆ ಎಂದು ಆಕ್ರೋಶ ಹೊರಹಾಕಿದರು.

Also Read  ಮುಂದುವರಿದ ವರುಣನ ಆರ್ಭಟ ➤ ನಾಳೆಯೂ (ಜು. 06) ದ.ಕ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ

error: Content is protected !!
Scroll to Top