‘ಸರ್ಕಾರ ಗ್ಯಾರಂಟಿ ಯೋಜನೆಗಾಗಿ ವಿಕಲಚೇತನರಿಗೆ ನೀಡಿದ್ದ ಅನುದಾನ ಕಡಿತ’- ಸಚಿವ ಪ್ರಹ್ಲಾದ್‌ ಜೋಶಿ ಆಕ್ರೋಶ

(ನ್ಯೂಸ್ ಕಡಬ) newskadaba.com ಬೆಂಗಳೂರು, . 30. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಭರದಲ್ಲಿ ರಾಜ್ಯ ಸರ್ಕಾರ ವಿಕಲಚೇತನರಿಗೆ ಅನುದಾನ ಕಡಿತ ಮಾಡಿದ ಆರೋಪಕ್ಕೆ ಒಳಗಾಗಿದೆ.

ಈ ವಿಚಾರವಾಗಿ ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ ಎಕ್ಸ್‌ನಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಕಳೆದ ವರ್ಷ ಸರ್ಕಾರ ವಿಕಲಚೇನರ ವಿವಿಧ ಯೋಜನೆಗಳಿಗೆ 53 ಕೋಟಿ ರೂ. ಅನುದಾನ ಮೀಸಲು ಇಡಲಾಗಿತ್ತು. ಆದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಬರೀ 10 ಕೋಟಿ ರೂ. ಅನುದಾನ ಮಾತ್ರ ಹಂಚಿಕೆ ಮಾಡಲಾಗಿದೆ. ಇದು ನಿಜಕ್ಕೂ ದುರದೃಷ್ಟಕರ. ಇದು ದಿವ್ಯಾಂಗರಿಗೆ ಆಗುತ್ತಿರುವ ಅನ್ಯಾಯ. ಇದರಿಂದ ಅವರ ಅಗತ್ಯ ಸೇವೆಗಳಿಗೆ ಧಕ್ಕೆ ಆಗಲಿದೆ. ಮೀಸಲಿಟ್ಟ ನಿಧಿಯನ್ನು ಅವರಿಗಾಗಿ, ಅವರ ಸೇವೆಗಾಗಿ ಉಪಯೋಗಿಸಬೇಕು ಎಂದು ಜೋಶಿ ಆಗ್ರಹಿಸಿದ್ದಾರೆ.

Also Read  ನಾಪತ್ತೆಯಾಗಿದ್ದ ಪೆರುವಾಯಿಯ ಯುವತಿ ಬೆಂಗಳೂರಿನಲ್ಲಿ ಪತ್ತೆ

 

error: Content is protected !!
Scroll to Top