(ನ್ಯೂಸ್ ಕಡಬ) newskadaba.com ಮಂಗಳೂರು, ನ. 30. ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿಯ ಗ್ರಾಮೀಣ ಭಾಗದಲ್ಲಿ ಗುರುವಾರ ರಾತ್ರಿ ಹೆಚ್ಚು ಚಳಿಯ ಅನುಭವವಾಗಿದ್ದು, ಮುಂದಿನ ಒಂದು ವಾರಕ್ಕೂ ಅಧಿಕ ಕಾಲ ಚಳಿಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ತಾಪಮಾನದಲ್ಲಿ 3-4 ಡಿ.ಸೆ. ತಗ್ಗಲಿದೆ. ಜಿಲ್ಲೆಯಲ್ಲಿ ಹಗಲು ವೇಳೆ ಪ್ರಖರ ಬಿಸಿಲಿನ ಮತ್ತು ಸಂಜೆ ಚಳಿಯ ವಾತಾವರಣ ಇರಲಿದೆ. ಮುಂದಿನ ವಾರಗಳಲ್ಲಿ ತಾಪಮಾನ ಇನ್ನಷ್ಟು ಕಡಿಮೆಯಾಗಲಿದೆ ಎಂದು ಭಾರತೀಯ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.