(ನ್ಯೂಸ್ ಕಡಬ) newskadaba.com ವಾರಣಾಸಿ, ನ. 30. ಶನಿವಾರ ಮುಂಜಾನೆ ಸಂಭವಿಸಿದ ಭಾರಿ ಅಗ್ನಿ ಅನಾಹುತದಲ್ಲಿ 200ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿಯ ಕ್ಯಾಂಟ್ ರೈಲ್ವೆ ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ನಡೆದಿದೆ.
ವಾಹನ ನಿಲುಗಡೆ ಪ್ರದೇಶದಲ್ಲಿ ಭಾರಿ ಪ್ರಮಾಣದ ಬೆಂಕಿಯ ಜ್ವಾಲೆಗಳು ಆವರಿಸಿದ್ದು, ಬೆಂಕಿಯನ್ನು ನಂದಿಸುವ ಕೆಲಸದಲ್ಲಿ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ನಿರತರಾಗಿರುವುದನ್ನು ದೃಶ್ಯಾವಳಿಗಳಲ್ಲಿ ಕಂಡುಬಂದಿದೆ. ಬೆಂಕಿಯ ಜ್ವಾಲೆಗಳಿಂದ ಸ್ಥಳದಲ್ಲಿ ಹೊಗೆ ಮತ್ತು ಮಬ್ಬು ಆವರಿಸಿತ್ತು. ಪ್ರಾಥಮಿಕ ತನಿಖೆಯ ಪ್ರಕಾರ, ಶಾರ್ಟ್ ಸರ್ಕ್ಯೂಟ್ ನಿಂದ ಈ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಎರಡು ಗಂಟೆಗಳ ಸತತ ಕಾರ್ಯಾಚರಣೆಯ ನಂತರ, ಬೆಂಕಿಯನ್ನು ನಂದಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.