ನಕ್ಸಲ್ ವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

(ನ್ಯೂಸ್ ಕಡಬ) newskadaba.com ಉಡುಪಿ, . 30. ನಕ್ಸಲ್ ವಿಕ್ರಂ ಗೌಡ ಎನ್ಕೌಂಟರ್ ನಕಲಿ ಅಲ್ಲ. ಎನ್ಕೌಂಟರ್ ನಕಲಿ ಎಂದು ಅನುಮಾನ ಪಡುವುದು ಬೇಡ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ.

 

ನಕ್ಸಲೈಟನ್ನು ಬೇರು ಸಮೇತ ಕಿತ್ತು ಹಾಕಬೇಕು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಿಲುವು. ಪರ ವಿರೋಧ ಚರ್ಚೆ ಎಲ್ಲಾ ಸಂದರ್ಭದಲ್ಲಿ ಇರುತ್ತದೆ. ಸರ್ಕಾರ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿದೆ. ಸಂಶಯ ಇದ್ದವರಿಗೆ ನಾವು ಮತ್ತೆ ಸ್ಪಷ್ಟನೆ ಕೊಡಲು ತಯಾರಿದ್ದೇವೆ ಎಂದು ಹೇಳಿದರು. ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತ ಇಲ್ಲ. ಭಿನ್ನಮತ ಇರೋದು ಬಿಜೆಪಿಯಲ್ಲಿ ಮಾತ್ರ. ಬಿಜೆಪಿ ಭಿನ್ನಮತದ ಬಗ್ಗೆ ಮಾಧ್ಯಮಗಳೇ ದಿನಾ ತೋರಿಸುತ್ತಿವೆ. ನಮ್ಮಲ್ಲಿ ಭಿನ್ನಮತ ಇಲ್ಲ ಅನ್ನೋದಕ್ಕೆ ಉಪಚುನಾವಣೆಯ ಫಲಿತಾಂಶವೇ ಉತ್ತರ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Also Read  ಸರ್ಕಾರಿ ಮಹಿಳಾ ಕೈಗಾರಿಕಾ ಸಂಸ್ಥೆ ➤ ಕೈಗಾರಿಕಾ ತರಬೇತಿಗೆ ಅರ್ಜಿ ಆಹ್ವಾನ

 

 

error: Content is protected !!
Scroll to Top