ಕಾರು- ಲಾರಿ ನಡುವೆ ಅಪಘಾತ: ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com . 30. ನೂತನ ಸೇತುವೆಯಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ನ. 29 ರಂದು ರಾತ್ರಿ ಸುಮಾರು 7 ಗಂಟೆಗೆ ನಡೆದಿದೆ. ಬಿ.ಸಿ.ರೋಡಿನಿಂದ ಮೆಲ್ಕಾರ್ ಕಡೆಗೆ ಸಂಚರಿಸುತ್ತಿದ್ದ ಲಾರಿ ಹಾಗೂ ಪಾಣೆಮಂಗಳೂರು ಕಡೆಯಿಂದ ಬರುತ್ತಿದ್ದ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಘಟನೆಯಲ್ಲಿ ಕಾರು ಜಖಂಗೊಂಡಿದೆಯಾದರೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ. ಚತುಷ್ಪತ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾಣೆಮಂಗಳೂರು ಸೇತುವೆಯ ಪಕ್ಕ ಹೊಸ ಸೇತುವೆ ಕಾಮಗಾರಿ ಪೂರ್ಣಗೊಂಡು ಇದೀಗ ವಾರಗಳ ಹಿಂದೆಯಷ್ಟೇ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. ಹಾಗಾಗಿ ಹಳೆಯ ಸೇತುವೆಯನ್ನು ಬಂದ್ ಮಾಡಿ ಅದರ ಸಂಪರ್ಕ ರಸ್ತೆಯ ಕಾಮಗಾರಿಯನ್ನು ಆರಂಭಿಸಿದ್ದಾರೆ. ಕಾಮಗಾರಿಯ ಹಿನ್ನೆಲೆಯಲ್ಲಿ ಹೊಸ ಸೇತುವೆ ಮೂಲಕ ದ್ವಿಮುಖ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಸೇತುವೆಯ ಅಧಿಕೃತವಾಗಿ ಉದ್ಘಾಟನೆ ಯಾಗದಿದ್ದರೂ ಜನರ ಉಪಯೋಗದ ದೃಷ್ಟಿಯಿಂದ ಕಂಪೆನಿಯವರು ಸೇತುವೆಯಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ ಸಂಚಾರಕ್ಕೆ ಮುಕ್ತಗೊಳಿಸಿದ್ದರು. ಸಂಚಾರ ಆರಂಭವಾಗಿ ವಾರ ಕಳೆದ ಕೂಡಲೇ ಪ್ರಥಮವಾಗಿ ಇಂದು ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Also Read  ಜ.22ಕ್ಕೆ 'ಮಂಗಳೂರಿನಲ್ಲಿ ಪ್ರಜಾಧ್ವನಿ ಯಾತ್ರೆ' ➤ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್

 

 

error: Content is protected !!
Scroll to Top