ಅರಣ್ಯ ಇಲಾಖೆಯ ಸಿಬ್ಬಂದಿ ಕಚೇರಿಯೊಳಗೆ ಕುಸಿದು ಬಿದ್ದು ಮೃತ್ಯು..!

(ನ್ಯೂಸ್ ಕಡಬ) newskadaba.com . 30. ರಾತ್ರಿ ಸಮಯದಲ್ಲಿ ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಮೃತಪಟ್ಟ ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಮೃತಪಟ್ಟವರನ್ನು ವೀರಕಂಬಗ್ರಾಮದ ಮಜ್ಜೋನಿ ದಿವಂಗತ ಕೃಷ್ಣಪ್ಪ ಮೂಲ್ಯರ ಪುತ್ರ ಜಯರಾಮ‌ ಮೂಲ್ಯ(45) ಎಂದು ಗುರುತಿಸಲಾಗಿದೆ. ಅವರು ಕಳೆದ ಸುಮಾರು 30 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ.29ರಂದು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಜೆ ವೇಳೆ ಇವರಿಗೆ ತಲೆಸುತ್ತು ಬರುವ ವಿಚಾರ ಇಲಾಖೆಯ ಜೊತೆ ಕೆಲಸಗಾರರಲ್ಲಿ ಹೇಳಿಕೊಂಡಿದ್ದರು ಎಂದು ಹೇಳಲಾಗಿದೆ. ಅ ಬಳಿಕ ಇವರು ಇಲಾಖೆಯೊಳಗೆ ಒಬ್ಬನೇ ಕರ್ತವ್ಯದಲ್ಲಿದ್ದು, ಮುಂಬಾಗಿಲ ಚಿಲಕ ಹಾಕಿಕೊಂಡು ಕೋಣೆಯೊಳಗೆ ಮಲಗಲು ಹೋಗುವ ವೇಳೆ ಟೇಬಲ್ ಮೇಲೆ ಕುಸಿದು ಬಿದ್ದು ಹೃದಯಾಘಾತದಿಂದ ನಿಧನರಾಗಿರಬೇಕು ಎಂದು ಸಂಶಯ ವ್ಯಕ್ತಪಡಿಸಲಾಗಿದೆ.

Also Read  ಭಾರತೀಯ ಪಾಸ್‍ಪೋರ್ಟ್  ಬಳಸಿ ಅಕ್ರಮವಾಗಿ ಬೆಂಗಳೂರಿಗೆ ಬಂದಿದ್ದ ಇಬ್ಬರು ಬಾಂಗ್ಲಾ ಪ್ರಜೆಗಳ ಬಂಧನ

 

 

error: Content is protected !!
Scroll to Top