(ನ್ಯೂಸ್ ಕಡಬ) newskadaba.com ಡಿ. 02. ತುಮಕೂರು: ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. 20 ಜನರಿಗೆ ಗಾಯವಾಗಿದ್ದು, ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಿನ ಜಾವ ಗೋವಾದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ನಂತರ ಬಸ್ ಪಲ್ಟಿಯಾಗಿದೆ. ಪರಿಣಾಮ ಬಸ್ನಲ್ಲಿದ್ದ ಮೂವರು ಮಹಿಳಾ ಪ್ರಯಾಣಿಕರು ಮೃತಪಟ್ಟಿದ್ದಾರೆ. 20 ಜನ ಪ್ರಯಾಣಿಕರಿಗೆ ಗಾಯವಾಗಿದೆ. ಬಸ್ನಲ್ಲಿ ಒಟ್ಟು 29 ಮಂದಿ ಪ್ರಯಾಣಿಸುತ್ತಿದ್ದರು. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ಹಾಗೂ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.