ಕ್ರೀಡಾ ಮಕ್ಕಳಿಗೆ ಶೇ25 ರಷ್ಟು ಹಾಜರಾತಿ, 10 ಗ್ರೇಸ್ ಮಾರ್ಕ್ ನೀಡಲು ಸರ್ಕಾರ ಚಿಂತನೆ: ಸಿಎಂ

(ನ್ಯೂಸ್ ಕಡಬ) newskadaba.com ಡಿ. 02. ಬೆಂಗಳೂರು:  ಕ್ರೀಡೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಹಾಜರಾತಿ ರಿಯಾಯಿತಿ ಮತ್ತು ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ 10 ಗ್ರೇಸ್ ಅಂಕಗಳನ್ನು ನೀಡುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.

ಭಾನುವಾರ ನಗರದಲ್ಲಿ ನಡೆದ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ​​(ಕೆಒಎ) ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಸಿಎಂ, ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಹಾಜರಾತಿ ರಿಯಾಯಿತಿ ಮತ್ತು ಗ್ರೇಸ್ ಮಾರ್ಕ್‌ ನೀಡುವ ಮನವಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕ್ರೀಡೆಯಲ್ಲಿ ತೊಡಗಿಕೊಳ್ಳುವ ಮಕ್ಕಳಿಗೆ ಪ್ರೋತ್ಸಾಹ ನೀಡಲು ನಿರ್ಧರಿಸಿದೆ ಎಂದು ಹೇಳಿದರು. ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಪಟುಗಳು ಭಾಗವಹಿಸಲು ಪ್ರೋತ್ಸಾಹಿಸಲು ಕೆಒಎ ಕಳೆದ 22 ವರ್ಷಗಳಿಂದ ಈ ಪ್ರಶಸ್ತಿಗಳನ್ನು ನೀಡುತ್ತಿದೆ. ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು-ನೆರವು ನೀಡಲು ನಾನು ಸದಾ ಸಿದ್ಧ. ರಾಜ್ಯ ಬಜೆಟ್ ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನಿರಂತರ ಅನುದಾನ ನೀಡಿದ್ದೇವೆ. ರಾಜ್ಯದಿಂದ ಯಾರಾದರೂ ಒಲಂಪಿಕ್ಸ್ ನಲ್ಲಿ ದೇಶಕ್ಕೆ ಒಂದು ಚಿನ್ನ ತನ್ನಿ ಎಂದು ನಾಡಿನ ಕ್ರೀಡಾಳುಗಳಲ್ಲಿ ಮನವಿ ಮಾಡುತ್ತಿದ್ದೇನೆಂದು ತಿಳಿಸಿದರು.

Also Read  ಮಂಗಳೂರು: ಸಿವಿಲ್ ನ್ಯಾಯಾಧೀಶರ ಪರೀಕ್ಷೆ..! ➤  ಯುವ ನ್ಯಾಯವಾದಿ ರಾಹುಲ್ ಶೆಟ್ಟಿಗಾರ್ ರಾಜ್ಯಕ್ಕೆ ಫಸ್ಟ್

ಚಿನ್ನದ ಪದಕ ಪಡೆದವರಿಗೆ ರೂ.6 ಕೋಟಿ ಮೀಸಲಿಟ್ಟಿದ್ದೀವಿ. ಬೆಳ್ಳಿ ಪದಕ ಪಡೆದವರಿಗೆ ರೂ.4 ಕೋಟಿ ಇಟ್ಟಿದ್ದೇವೆ. ಆದರೆ, ಯಾರೂ ಪದಕ ತರ್ತಾನೇ ಇಲ್ಲ. ದೇಶಕ್ಕೆ ಯಾರಾದರೂ ಚಿನ್ನ ಗೆದ್ದು ತನ್ನಿ. ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಬೇಕು ಎನ್ನುವ ಪ್ರೋತ್ಸಾಹದಾಯಕ ಉದ್ದೇಶದಿಂದ ಕರ್ನಾಟಕ ಒಲಂಪಿಕ್ ಸಂಸ್ಥೆ 22 ವರ್ಷಗಳಿಂದ ಈ ಪ್ರಶಸ್ತಿಗಳನ್ನು ನೀಡುತ್ತಿದೆ.

Also Read  ರಾಮಕುಂಜದಲ್ಲಿ ಬೆಳೆ ಸಮೀಕ್ಷೆಯ ಕುರಿತು ಮಾಹಿತಿ ಕಾರ್ಯಗಾರ

error: Content is protected !!
Scroll to Top