ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ 7ನೇ ತರಗತಿ ವಿದ್ಯಾರ್ಥಿ ಮೃತ್ಯು



(ನ್ಯೂಸ್ ಕಡಬ) newskadaba.com ಕಾರವಾರ, ಡಿ. 02. ಮನೆಯಲ್ಲಿ ಆಟವಾಡುತ್ತಾ ಬಲೂನ್ ಊದಲು ಹೋಗಿ ಗಂಟಲಲ್ಲಿ ಸಿಲುಕಿ ಬಾಲಕ ಉಸಿರುಗಟ್ಟಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ.





ಮೃತಪಟ್ಟ ವಿದ್ಯಾರ್ಥಿಯನ್ನು ನವೀನ ನಾರಾಯಣ ಬೆಳಗಾಂವಕರ್ (13) ಎಂದು ಗುರುತಿಸಲಾಗಿದೆ. ಈತ ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಮನೆಯಲ್ಲಿ ಆಟವಾಡುತಿದ್ದ ವೇಳೆ ಬಲೂನ್ ಊದುವಾಗ ಬಾಯಿಯ ಒಳಗೆ ಜಾರಿ ಹೋಗಿ ಗಂಟಲಲ್ಲಿ ಸಿಲುಕಿಕೊಂಡಿದೆ. ಗಂಟಲಲ್ಲಿ ಬಲೂನ್ ಸಿಲುಕಿ ಉಸಿರುಗಟ್ಟಿ ಒದ್ದಾಡುತಿದ್ದ ಈತನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಉಸಿರಾಟವಾಡಲು ಸಾಧ್ಯವಾಗದೇ ಕೊನೆಯುಸಿರೆಳೆದಿದ್ದಾನೆ ಎಂದು ವರದಿ ತಿಳಿಸಿದೆ.






error: Content is protected !!
Scroll to Top