(ನ್ಯೂಸ್ ಕಡಬ) newskadaba.com ತುಮಕೂರು, ಡಿ. 02. ಕೋರ ಹೋಬಳಿಯ ಪಿ.ಗೊಲ್ಲಹಳ್ಳಿ ಹತ್ತಿರ ನೂತನ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಶಂಕುಸ್ಥಾಪನೆಯನ್ನು ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಭೂಮಿ ಮಂಜೂರಾಗಿರುವ ಆದೇಶ ಪತ್ರವನ್ನು ಕೆಎಸ್‌ಸಿಎ ಅಧ್ಯಕ್ಷ ರಘುರಾಮ್ ಭಟ್ ಅವರಿಗೆ ಹಸ್ತಾಂತರಿಸಲಾಯಿತು. ಬಳಿಕ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಾತನಾಡಿ, ಭಾರತೀಯ ಕ್ರಿಕೆಟ್ ಮಂಡಳಿಯವರಿಗೆ ಅಭಿನಂದನೆಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ.ಎನ್.ರಾಜಣ್ಣ, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ. ಕೆ.ಗೋವಿಂದರಾಜು, ಶಾಸಕರಾದ ಬಿ.ಸುರೇಶ್‌ಗೌಡ, ಜ್ಯೋತಿಗಣೇಶ್, ಸುರೇಶ್, ಶ್ರೀನಿವಾಸ್, ವೆಂಕಟೇಶ್, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಆರ್.ರಾಜೇಂದ್ರ, ಕೆಎಸ್‌ಸಿಎ ಅಧ್ಯಕ್ಷ ಎ.ರಘುರಾಮ್ ಭಟ್ ಕಾರ್ಯದರ್ಶಿ ಶಂಕರ್, ಮಾಜಿ ಶಾಸಕ ಗೌರಿಶಂಕರ್, ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ ಮುಂತಾದವರು ಇದ್ದರು.