ಬೈಕ್- ಸರ್ಕಾರಿ ಬಸ್ ಡಿಕ್ಕಿ: ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, ಡಿ. 02. ಬೈಕ್‌ಗೆ ಸರ್ಕಾರಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಕವಿತಾಳ ಗ್ರಾಮದ ಬಳಿ ನಡೆದಿದೆ.

ಮೃತ ಬೈಕ್ ಸವಾರನನ್ನು ದೇವತಗಲ್ ಗ್ರಾಮದ ನಿವಾಸಿ ರಂಗನಾಥ ನಾಯಕ (35) ಎಂದು ಗುರುತಿಸಲಾಗಿದೆ. ಲಿಂಗಸುಗೂರು ಮೂಲಕ ರಾಯಚೂರಿಗೆ ಬರುತ್ತಿದ್ದ ಬಾದಾಮಿ ಘಟಕಕ್ಕೆ ಸೇರಿದ ವಾಯುವ್ಯ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

Also Read  ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಮಹಿಳೆ..!

 

error: Content is protected !!