ದ.ಕ. ಕಾಂಗ್ರೆಸ್ ಕಚೇರಿಯಲ್ಲೇ ಮುಖಂಡರ ನಡುವೆ ಹೊಡೆದಾಟ

(ನ್ಯೂಸ್ ಕಡಬ) newskadaba.com ಡಿ. 02. ಮಂಗಳೂರು: ದ.ಕ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ಗ್ರಾ.ಪಂ‌ ಸದಸ್ಯರು ಹಾಗೂ ಕಾರ್ಯಕರ್ತರಿಗೆ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ನಾಯಕರ ನಡುವೆ ಮಾರಾಮಾರಿ ನಡೆದಿದೆ ಎಂದು ತಿಳಿದು ಬಂದಿದೆ.

ಇತ್ತೀಚೆಗೆ ನಡೆದ ಗ್ರಾಪಂ ಉಪ ಚುನಾವಣೆಯಲ್ಲಿ ಗೆದ್ದವರಿಗೆ ಪಕ್ಷದ ವತಿಯಿಂದ ಸನ್ಮಾನಿಸುವ ವಿಷಯದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮತ್ತು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪ್ರಕಾಶ್ ಚಂದ್ರ ಶೆಟ್ಟಿ ಅವರ ಮಧ್ಯೆ ಮಾತಿನ ಚಕಮಕಿ ನಡೆದು ಬಳಿಕ ಪರಸ್ಪರ ಹೊಡೆದಾಡಿಕೊಂಡರು ಎನ್ನಲಾಗಿದೆ. ಪಕ್ಷದ ಜಿಲ್ಲಾ ನಾಯಕರ ಮಧ್ಯೆ ಕೆಲವು ದಿನದಿಂದ ಮುಸುಕಿನ ಗುದ್ದಾಟ ನಡೆಯುತ್ತಿದ್ದು, ಅದು ಇಂದು ಸ್ಫೋಟಗೊಂಡಿದೆ ಎಂದು ಹೇಳಲಾಗುತ್ತಿದೆ. KPCC ಕಾರ್ಯಾಧ್ಯಕ್ಷ ಮಂಜುನಾಥ್‌ ಭಂಡಾರಿ, ಮಾಜಿ ಸಚಿವ ರಮಾನಾಥ ರೈ, ಎಂಎಲ್‌ಸಿ ಐವನ್‌ ಡಿಸೋಜ, ಮಿಥುನ್‌ ರೈ, ಇನಾಯತ್‌ ಅಲಿ ಉಪಸ್ಥಿತರಿದ್ದ ಸಭೆಯಲ್ಲೇ ಮುಖಂಡರ ನಡುವೆ ಹೊಡೆದಾಟ ನಡೆದಿದೆ.

Also Read  ದ.ಕ. ಜಿಲ್ಲೆಯ ಐದು ತಾಲೂಕುಗಳ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

error: Content is protected !!
Scroll to Top