ಕವಿತಾ ಲಂಕೇಶ್ ನೇತೃತ್ವದಲ್ಲಿ ಲೈಂಗಿಕ ದೌರ್ಜನ್ಯ ತಡೆ ಕಮಿಟಿ ರಚನೆ

(ನ್ಯೂಸ್ ಕಡಬ) newskadaba.com ಡಿ. 03 ಬೆಂಗಳೂರು: ಕರ್ನಾಟಕ ಚಲನಚಿತ್ರೋದ್ಯಮದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಸಮಿತಿ  ಸಮಿತಿ ರಚಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆದೇಶ ಹೊರಡಿಸಿದೆ. ನಿರ್ದೇಶಕಿ ಕವಿತಾ ಲಂಕೇಶ್‌ ಅವರನ್ನು ಇದಕ್ಕೆ ಅಧ್ಯಕ್ಷರನ್ನಾಗಿಸಲಾಗಿದೆ.

ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಚಿತ್ರರಂಗದ ಸದಸ್ಯರು ಹಾಗೂ ಮಹಿಳಾ ಸಂಘಟನೆಗಳ ಹಲವು ತಿಂಗಳುಗಳ ಒತ್ತಡಕ್ಕೆ ಮಣಿದಿರುವ ವಾಣಿಜ್ಯ ಮಂಡಳಿ, ಕೊನೆಗೂ ಸಮಿತಿ ರಚಿಸಿದೆ. ಕೇರಳ ಚಿತ್ರರಂಗದ ಲೈಂಗಿಕ ದೌರ್ಜನ್ಯದ ಕುರಿತು ಜಸ್ಟೀಸ್ ಹೇಮಾ ಸಮಿತಿ ವರದಿ ನೀಡಿದ ಬಳಿಕ, ಕರ್ನಾಟಕದಲ್ಲಿ ಸಹ ಸಮಿತಿ ರಚಿಸಬೇಕು ಎಂಬ ಕೂಗು ಎದ್ದಿತ್ತು. ಆದರೆ ಇದಕ್ಕೆ ಚಿತ್ರರಂಗದ ಪ್ರಮುಖರು ಆಸಕ್ತಿ ತೋರಿರಲಿಲ್ಲ. ಇದೀಗ, ಹಿರಿಯ ನಿರ್ದೇಶಕಿ ಕವಿತಾ ಲಂಕೇಶ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ. ಕಾಯಂ ಸದಸ್ಯರಾಗಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಮ್ ಸುರೇಶ್, ಸದಸ್ಯರಾಗಿ ಹಿರಿಯ ನಟಿ ಪ್ರಮೀಳಾ ಜೋಶಾಯ್, ಮಹಿಳಾ ಹಕ್ಕುಗಳ ಹೋರಾಟಗಾರ್ತಿ ವಿಮಲಾ ಕೆ.ಎಸ್, ಹಿರಿಯ ವಕೀಲೆ ರಾಜಲಕ್ಷ್ಮಿ ಅಂಕಲಗಿ, ಟ್ರಾನ್ಸ್‌ ಜೆಂಡರ್ ಹೋರಾಟಗಾರರಾದ ಮಲ್ಲು ಕುಂಬಾರ್, ನಟಿ ಶೃತಿ ಹರಿಹರನ್, ಹಿರಿಯ ಪತ್ರಕರ್ತ ಮುರುಳೀಧರ ಖಜಾನೆ, ರಂಗಕರ್ಮಿ ಶಶಿಕಾಂತ್ ಯಡಹಳ್ಳಿ, ನಿರ್ಮಾಕಪಕರಾದ ಸಾರಾ ಗೋವಿಂದ್ ಸಮಿತಿಯಲ್ಲಿ ಇದ್ದಾರೆ.

Also Read  ಉಪ್ಪಿನಂಗಡಿ: ಡಾ.ಸುಪ್ರೀತ್ ಲೋಬೋರವರಿಗೆ ಆಯುರ್ವೇದದಲ್ಲಿ ಪಿಎಚ್‌.ಡಿ ಪದವಿ                                                                                                                                        

 

error: Content is protected !!
Scroll to Top