‘ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ 44 ಕೋಟಿಗಳನ್ನು ಮಂಜೂರು’ – ಸಿಎಂ

(ನ್ಯೂಸ್ ಕಡಬ) newskadaba.com ಡಿ. 03 ಬೆಂಗಳೂರು : ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದರು.

ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತನರಿದ್ದಾರೆ. ಇವರೆಲ್ಲರ ಆರೈಕೆ ಮಾಡಿ ವಿಶೇಷ ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯ. ಸಂವಿಧಾನದಲ್ಲಿ ಎಲ್ಲರೂ ಬದುಕುವ , ಉದ್ಯೋಗ ಪಡೆಯುವಂತಹ ಅವಕಾಶವನ್ನು ಕಲ್ಪಿಸಿದೆ. ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ. ಅವರು ಸಮಾಜದ ಆಸ್ತಿಯಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ಪಾರಾ ಒಲಂಪಿಕ್ಸ್ ನಲ್ಲಿ ಭಾರತದ ವಿಕಲಚೇತನ ಕ್ರೀಡಾಪಟುಗಳು ಹೆಚ್ಚಿನ ಪದಕಗಳನ್ನು ಪಡೆದಿರುವುದು ಹೆಮ್ಮೆಯ ವಿಚಾರ. ನಮ್ಮ ಸರ್ಕಾರ ಈ ಬಾರಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು “ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವದ ಉತ್ತೇಜನ” ಎಂಬ ಘೋಷ ವಾಕ್ಯದೊಂದಿಗೆ ಆಚರಿಸುತ್ತಿದ್ದೇವೆ ಎಂದರು.

Also Read  ಪುತ್ತೂರು: ಯುವಕನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ...! ಗಾಯಾಳು ಆಸ್ಪತ್ರೆಗೆ ದಾಖಲು

error: Content is protected !!
Scroll to Top