ಆಟೋ ಚಾಲಕ ನಾಪತ್ತೆ: ಪ್ರಕರಣ ದಾಖಲು..!

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 04. ಆಟೋ ಚಾಲಕ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಆಟೋ ಚಾಲಕನನ್ನು ವೀರಕಂಬ ಗ್ರಾಮದ ಬಾಯಿಲ ನಿವಾಸಿ ಪದ್ಮನಾಭ ನಾಯ್ಕ ಅವರ ಪುತ್ರ ಧನರಾಜ್‌( 28) ಎಂದು ಗುರುತಿಸಲಾಗಿದೆ.

ನವಂಬರ್‌ 28ರಂದು ಎಂದಿನಂತೆ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲದಿಂದ ಬೆಳಿಗ್ಗೆ 8.30 ಗಂಟೆಗೆ ಅಟೋರಿಕ್ಷಾವನ್ನು ತೆಗೆದುಕೊಂಡು ಬಾಡಿಗೆಗೆ ಹೋಗುತ್ತೇನೆಂದು ಹೇಳಿ ಹೋದವನು ಈ ದಿನ ಇನ್ನೂ ಮನೆಗೆ ಬಂದಿರುವುದಿಲ್ಲ, ಈ ಕಾರಣ ಈ ಬಗ್ಗೆ ಸಂಬಂದಿಕರಲ್ಲಿ, ನೆರೆಕರೆಯವರಲ್ಲಿ ಹಾಗೂ ಸ್ನೇಹಿತರಲ್ಲಿ ವಿಚಾರಿಸಲಾಗಿ ಎಲ್ಲಿಯೂ ಪತ್ತೆಯಾಗದೆ ಕಾಣೆಯಾಗಿರುತ್ತಾನೆ. ಧನರಾಜ್‌ನ ರಿಕ್ಷಾ ಮಾತ್ರ ಉಪ್ಪಿನಂಗಡಿಯಲ್ಲಿದ್ದು ಆತನ ಮೊಬೈಲ್‌ ನಂಬ್ರ 9008117093ನೇಯದ್ದು ಸ್ವೀಚ್‌ ಆಫ್‌ ಆಗಿರುತ್ತದೆ. ಮನೆಗೂ ಬಾರದೆ ಸಂಭಂದಿಕರ ಹಾಗೂ ಸ್ನೇಹಿತರ ಮನೆಗೂ ಹೋಗದೆ ಕಾಣೆಯಾದ ಧನರಾಜ್‌ನನ್ನು ಪತ್ತೆಮಾಡಿ ಕೊಡಬೇಕಾಗಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

Also Read  ವಾಟ್ಸ್ಆ್ಯಪ್ ವಿಡಿಯೋ ಕಾಲ್ ಮೂಲಕ ವೈದ್ಯ ಸಲಹೆಯಂತೆ ಹೆರಿಗೆ ಮಾಡಿಸಿದ ಸ್ಥಳೀಯ ಮಹಿಳೆಯರು.. !!!

 

error: Content is protected !!
Scroll to Top